ವಸತಿ ನಿಲಯದ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - Mahanayaka
7:24 AM Thursday 19 - September 2024

ವಸತಿ ನಿಲಯದ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

students protest
13/10/2021

ಬೆಂಗಳೂರು: ವಸತಿಗೃಹದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ನಗರದ ವಿದ್ಯಾಪೀಠ ಹನುಮಂತ ನಗರ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಸತಿ ನಿಲಯದ ಹಲವು ಸಮಸ್ಯೆಗಳನ್ನು ಬಗೆಹರಿಸುಂತೆ ಮತ್ತು ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳ ಹೋರಾಟಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವ ವಹಿಸಿ ಹೋರಾಟ ಮಾಡಲಾಯಿತು ಎಂದು ಪರಿಷತ್ ನ ಮುಖಂಡರಾದ ಅಕ್ಷಯ್ ಹಾಜಿಮನಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿ ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ಆಪ್ತ ಕಾರ್ಯದರ್ಶಿ ಎ.ಡಿ. ನಾಗೇಶ್ ರವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಒಂದು ವಾರದವರೆಗೆ ಕಾಲವಕಾಶ ಕೊಡಿ, ಪ್ರಾಮಾಣಿಕವಾಗಿ ಇಲ್ಲಿಯ ಸಮಸ್ಯೆಗೆ ಪರಿಹಾರ ಮಾಡುತ್ತೇವೆ ಎಂದು ಭರವಸೆ ನೀಡಿದರು.


Provided by

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಾದ  ಚನ್ನಪ್ಪ ಚಾಲವಾದಿ, ಚರಣು ಮುಲಿಮನಿ, ವಸತಿ ನಿಲಯದ ವಿದ್ಯಾರ್ಥಿಗಳಾದ ಬಗವಂತರಾಯ ಹೊಸಮನಿ,  ವಿನೋದ್ ಚವ್ಹಾಣ್,  ತುಕಾರಾಮ, ಗುಂಡೂರಾವ್, ವಿಶಾಲ, ವಿನೋದ್ ಪೋದಾರ್, ಪ್ರಮೋದ್ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟ: ರಸ್ತೆಯಲ್ಲಿಯೇ ವ್ಯಾಪಿಸಿದ ಬೆಂಕಿ

ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು

ಗುಂಡೇಟಿನಿಂದ ಮಾಲಿಕನ ಪ್ರಾಣ ಉಳಿಸಿದ ಸ್ಮಾರ್ಟ್ ಫೋನ್!

ಇತ್ತೀಚಿನ ಸುದ್ದಿ