ವ್ಯಾಟಿಕನ್ ಸಿಟಿ: ಮೇ 7ರಿಂದ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಆರಂಭ

ವ್ಯಾಟಿಕನ್ ಸಿಟಿ: ಕ್ಯಾಥೋಲಿಕ್ ಪರಮೋಚ್ಚ ಗುರು ಪೋಪ್ ಫ್ರಾನ್ಸಿಸ್ ನಿಧನರಾಗಿರುವ ಹಿನ್ನೆಲೆ ತೆರವಾಗಿರುವ ಅವರ ಸ್ಥಾನಕ್ಕೆ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ.
ಮೇ 7ರಿಂದ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.21 ರಂದು ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅನಾರೋಗ್ಯದಿಂದ ನಿಧನರಾಗಿದ್ದರು. ಏ.26ರಂದು ಅವರ ಅಂತ್ಯಕ್ರಿಯೆ ನಡೆದಿತ್ತು.
ಅಂತ್ಯಕ್ರಿಯೆಯ ಬೆನ್ನಲ್ಲೇ ಸೋಮವಾರ ಕಾರ್ಡಿನಲ್ ಗಳ ಅನೌಪಚಾರಿಕ ಸಭೆ ನಡೆಸಲಾಗಿತ್ತು. ಸಭೆಯಲ್ಲಿ 180ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಸಮಾವೇಶದ ದಿನಾಂಕ ಪ್ರಕಟಿಸಲಾಗಿದೆ.
ಪೋಪ್ ನಿಧನರಾದ 15 ರಿಂದ 20 ದಿನಗಳ ಬಳಿಕ ನೂತನ ಪೋಪ್ ಆಯ್ಕೆಯ ಪ್ರಕ್ರಿಯೆ ಆರಂಭವಾಗುತ್ತದೆ. 80 ವರ್ಷದೊಳಗಿನ ಕಾರ್ಡಿನಲ್ ಗಳು ವಿಶ್ವದ ವಿವಿಧೆಡೆಯಿಂದ ವ್ಯಾಟಿಕನ್ ಗೆ ಆಗಮಿಸುತ್ತಾರೆ. ಬಳಿಕ ಪೋಪ್ ಆಯ್ಕೆಗಾಗಿ ಸಂತಾ ಮಾರ್ತಾನಲ್ಲಿ ಕಾರ್ಡಿನಲ್ ಗಳು ಚರ್ಚೆ ನಡೆಸುತ್ತಾರೆ. ಸಿಸ್ಟೀನ್ ಛಾಪೆಲ್ ನಲ್ಲಿ ಈ ಮತದಾನ ಪ್ರಕ್ರಿಯೆಯು ನಡೆಯುತ್ತದೆ.
ಎಲ್ಲಾ ಕಾರ್ಡಿನಲ್‌ಗಳು ಈ ಚರ್ಚೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಈ ಚರ್ಚೆಯಲ್ಲಿ ಯಾರು ಹೇಗೆ ಮಾತನಾಡುತ್ತಾರೆ. ಅವರ ಧಾರ್ಮಿಕ ಜ್ಞಾನದ ಆಧಾರದ ಮೇಲೆ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಒಬ್ಬರು ಮೂರನೇ ಎರಡಷ್ಟು ಮತ ಪಡೆಯುವವರೆಗೂ ದಿನದಲ್ಲಿ 2 ಬಾರಿ ಮತದಾನ ಪ್ರಕ್ರಿಯೆ ನಡೆಯುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: