ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಎಬಿಬಿಪಿ ಒತ್ತಾಯ - Mahanayaka
10:16 PM Thursday 14 - November 2024

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಎಬಿಬಿಪಿ ಒತ್ತಾಯ

28/02/2021

ಮಂಗಳೂರು: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡರು, ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್  ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಅಖಿಲ ಭಾರತೀಯ  ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ  ಮಾಡಿಸಿತ್ತು. ಆದರೆ ಇದೀಗ ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸಿಟ್ ಬ್ಲಾಕಿಂಗ್  ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ  ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ.  ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತದೆ ಎಂದು ಆಗ್ರಹಿಸಿದರು.

ಈ ಹೋರಾಟದ ನೇತೃತ್ವವನ್ನು ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ , ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯೆ  ದೀಪ್ತಿ , ನಗರ ಸಹಕಾರ್ಯದರ್ಶಿ ಕಿರಣ್, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ , ಹೋರಾಟ ಪ್ರಮುಖ್  ಪ್ರಣಮ್, ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಪ್ರಮುಖರಾದ ಚೇತನ್, ವಿಕ್ಯಾತ್, ಆದರ್ಶ್, ಧರಣಿಶ್, ಭವನೀಶ್ ಶೆಟ್ಟಿ, ವರುಣ್, ಕೀರ್ತನ್, ಸುಶಾಂತ್, ಸಂತೋಷ್ ಬರ್ಕೆ, ಶ್ರಾವ್ಯ, ಕುಶಾಲ್ , ಹರ್ಷಿತ್ ವಹಿಸಿದ್ದರು




ಇತ್ತೀಚಿನ ಸುದ್ದಿ