ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಮಾ. 7ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8ರಂದು ಉತ್ತರ ಒಳನಾಡಿದನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದೆರಡು ತಿಂಗಳಿನಿಂದ ರಾಜ್ಯದಲ್ಲಿ ಇದ್ದ ಒಣ ಹವೆ ಕೊನೆಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವುದರಿಂದ ವಾಯುಭಾರ ಕುಸಿತವಾಗಿದೆ. ಇದರಿಂದ ಮಾ. 7ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ.
ಮಾ. 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಾದಂತ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್
ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ
ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸಿದ್ದು ಮೋದಿಜಿ | ಸಚಿವ ಹಾಲಪ್ಪ
ಹರ್ಷ ಕೊಲೆ ಪ್ರಕರಣ: ಎನ್ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ