ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಶೀಘ್ರವೇ ಹೊಸ ಆಟೋ: ಶಾಸಕ ವೇದವ್ಯಾಸ ಕಾಮತ್ ಹೇಳಿಕೆ

purushottam poojary
17/01/2023

ಮಂಗಳೂರಿನ ನಾಗರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅನೇಕ ರೀತಿಯ ಕಷ್ಟಗಳನ್ನು, ನೋವುಗಳನ್ನು ಅನುಭವಿಸಿದ್ದು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರು. ಅವರು ಇದೀಗ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ನಾನು ಅವರ ಆರೋಗ್ಯದ ಯೋಗಕ್ಷೇಮವನ್ನು ವಿಚಾರಿಸಿದ್ದೇನೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ನೀಡಿದ್ದಾರೆ.

ನಾಗುರಿ ಬಾಂಬ್ ಸ್ಪೋಟದ ಸಂತ್ರಸ್ತ ಶ್ರೀ ಪುರುಷೋತ್ತಮ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ ಬಳಿಕ ಮಾಧ್ಯಮದವರ ಜೊತೆಗೆ ಅವರು ಮಾತನಾಡುತ್ತಿದ್ದರು.

ಸ್ಪೋಟದಿಂದ ಹಾನಿಗೀಡಾದ ಆಟೋ ರಿಕ್ಷಾ ಬದಲಿಗೆ ಶೀಘ್ರದಲ್ಲೇ ನನ್ನ ವೈಯಕ್ತಿಕ ನೆಲೆಯಲ್ಲಿ ಹೊಸ ಆಟೋ ಕೊಡಿಸಲಾಗುವುದು.‌ ಅವರು ಶೀಘ್ರವಾಗಿ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಹೇಳಿದರು.

12 ದಿವಸದ ಒಳಗಡೆ ಅವರಿಗೆ ಹೊಸ ರಿಕ್ಷಾವನ್ನು ನೀಡುವ ಕೆಲಸವನ್ನು ಮಾಡ್ತೀವಿ ಅಂತ ಶಾಸಕರು ಇದೇ ವೇಳೆ ಭರವಸೆ ನೀಡಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version