ವಿದೇಶಕ್ಕೆ ಹೋಗುವುದಾಗಿ ಹೇಳಿ, ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ!
ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆ ಎಂದು ಹೋಗಿದ್ದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಮಂಗಳವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ.
ಕುತ್ತಾರು ತೇವುಲ ನಿವಾಸಿ ಸುರೇಶ್(48) ಆತ್ಮಹತ್ಯೆ ಮಾಡಿಕೊಂಡಿರುವವರು ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ಸೋಮೇಶ್ವರದ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಮಂಗಳವಾರ ಸೋಮೇಶ್ವರ ಕಡಲ ಕಿನಾರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಸುರೇಶ್ ಅವರು ತೊಕ್ಕೊಟ್ಟಿನ ಪ್ಲ್ಯಾನಿಂಗ್ ಪ್ಯಾಲೇಸ್ ಮೂಲಕ ಆರ್ಕಿಟೆಕ್ಟ್ ಆಗಿ, ಭೂ ವ್ಯವಹಾರ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಹಲವು ವರ್ಷಗಳಿಂದಲೂ ತೊಡಗಿದ್ದರು. ಸೋಮವಾರ ಮಕ್ಕಳಲ್ಲಿ ವಿದೇಶಕ್ಕೆ ತೆರಳುತ್ತೇನೆ ಎಂದು ತಿಳಿಸಿ, ಕಾರು ಮತ್ತು ಬಂಗಾರವನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು ಎನ್ನಲಾಗಿದೆ.
ತಡ ರಾತ್ರಿ ತಮ್ಮ ಸಂಬಂಧಿಕರಿಗೆ ಕರೆ ಮಾಡಿ, ತಾನು ದೂರ ಹೋಗುತ್ತಿದ್ದೇನೆ. ನಿಮಗೆ ಇನ್ನು ಸಿಗುದಿಲ್ಲ ಎಂದಿದ್ದರು ಎನ್ನಲಾಗಿದೆ. ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಸೋಮೇಶ್ವರ ಕಡಲ ಕಿನಾರೆಯಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು.
ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಪತ್ನಿ ಮಕ್ಕಳಿಂದ ದೂರವಿದ್ದು, ಬೇರೊಂದು ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮರದ ಕೊಂಬೆ ಬಿದ್ದು ಸ್ಥಳದಲ್ಲೇ ಯುವಕ ಸಾವು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್ಗೆ ಷರತ್ತುಬದ್ಧ ಜಾಮೀನು
ಬೆಟ್ಟದಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ
ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ
ಮಹಿಳೆಯರು ಹಾಕುವ ಬಟ್ಟೆಯಿಂದ ಪುರುಷರು ಉದ್ರೇಕವಾಗುತ್ತಾರೆ: ರೇಣುಕಾಚಾರ್ಯ