ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ - Mahanayaka

ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

karence
01/04/2022

ಮಂಗಳೂರು: ಪ್ರಯಾಣಿಕನೋರ್ವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆರೋಪಿಯು‌ ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ. ತಪಾಸಣೆಯ ವೇಳೆ 25,000 US ಡಾಲರ್ ಹಣವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ. ಇದರ ಭಾರತೀಯ ರೂಪಾಯಿ ಮೌಲ್ಯ 18,80,000 ರೂ. ಆಗಿದೆ .

ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ‌ ಮಾಡುತ್ತಿರುವುದು ಪತ್ತೆಯಾದ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗ್ರಾಹಕರಿಗೆ ಬಿಗ್ ಶಾಕ್: ಎಲ್​ ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂಪಾಯಿ ಏರಿಕೆ

ಏನಿದು ಹಲಾಲ್ ಮಾಂಸ?  ಅದು ಅಷ್ಟೊಂದು ಅಪಾಯಕಾರಿಯೇ?

ಮೀಸಲಾತಿ ಕಲ್ಪಿಸದೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ: ಸಿದ್ದರಾಮಯ್ಯ

ಜ್ಯೋತಿಷಿ ಮನೆ ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಗಂಡಸ್ತನ ಪದ ಬಳಕೆ: ಎಚ್‌.ಡಿ.ಕುಮಾರಸ್ವಾಮಿ ವಿಷಾದ

 

ಇತ್ತೀಚಿನ ಸುದ್ದಿ