ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ - Mahanayaka

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

latti
31/01/2022

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎವಿಬಿಪಿ ಸಂಘಟನೆ ಜೊತೆ ಸೇರಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿವಿ ಆವರಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ (ಜ್ಞಾನ ಭಾರತಿ) ನಡೆದ ಪ್ರತಿಭಟನೆಯಲ್ಲಿ ಮುಖ್ಯವಾಗಿ ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿವಿಯ ವಿಳಂಬ ಧೋರಣೆ ಮತ್ತು ದ್ವಂದ್ವ ನಿಲುವು ಕುರಿತು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.‌ ಮೌಲ್ಯಮಾಪನ ಆಗಿ ಸುಮಾರು ದಿನಗಳು ಕಳೆದರೂ ಇನ್ನೂ ಎಂಕಾಂ, ಎಂಸಿಎ, ಬಿಎಸ್ಸಿ, ಎಂಎಸ್ಸಿ, ಎಂಎ, ಬಿಎಡ್‌, ಎಂಬಿಎ ಹಾಗೂ ಇತರ ವಿಭಾಗಗಳ ಫಲಿತಾಂಶ ಪ್ರಕಟವಾಗಿಲ್ಲ.

ಹೀಗಾಗಿ ಈ ಕೂಡಲೇ ರಿಸಲ್ಟ್​ ಪ್ರಕಟವಾಗಬೇಕು. ಬಿಎಡ್ ಪದವಿಯ ಅಂಕಪಟ್ಟಿ ಹಾಗೂ ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು. ಸ್ನಾತಕ, ಸ್ನಾತಕೋತ್ತರ ಮತ್ತು ವಿದ್ಯಾಭ್ಯಾಸ ಮುಗಿಸಿರುವ ಹಿರಿಯ ವಿದ್ಯಾರ್ಥಿಗಳಿಗೆ ಅವರ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರವನ್ನು ನೀಡಬೇಕು. ಕೋವಿಡ್-19 ಕಾರಣದಿಂದಾಗಿ ಪರೀಕ್ಷೆಯನ್ನು ಬರೆಯಲಿಕ್ಕೆ ಆಗದ ವಿದ್ಯಾರ್ಥಿಗಳಿಗೆ ಒಂದು ಬಾರಿ ನಿರ್ಗಮನ ಯೋಜನೆ ಪರೀಕ್ಷೆ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಕೋವಿಡ್ ಕಾರಣದಿಂದಾಗಿ 2020- 2021ನ ಸಾಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿಲ್ಲ, ಆದರೂ ಪರೀಕ್ಷಾ ಶುಲ್ಕವನ್ನು ವಿಶ್ವವಿದ್ಯಾಲಯವು ಸಂಗ್ರಹಿಸಿದೆ. ಇದು ವಿದ್ಯಾರ್ಥಿಗಳಿಗೆ ಹೊರೆಯಾಗಿದೆ. ಈ ವರ್ಷ ಪರೀಕ್ಷಾ ಶುಲ್ಕ ಸಂಗ್ರಹಿಸಿದ್ದಲ್ಲದೇ ಅದನ್ನು ಹೆಚ್ಚು ಮಾಡಿದ್ದಾರೆ. ಇದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷಾ ಶುಲ್ಕ ಹೆಚ್ಚು ಮಾಡಿರುವುದು ಅತ್ಯಂತ ಖಂಡನೀಯ. ಹಿಂದಿನ ವರ್ಷ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ಈ ವರ್ಷ ಪರೀಕ್ಷೆಗೆ ಹೊಂದಾಣಿಕೆ ಮಾಡಿ ಈ ವರ್ಷದ ಪರೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.‌

ಹಾಸ್ಟೆಲ್​​ಗಳ ಅಸಮರ್ಪಕ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ದನಗಳಂತೆ ತುಂಬಿಸಲಾಗುತ್ತಿದೆ ಎಂದು ಆರೋಪಿಸಿರುವ ಎವಿಬಿಪಿ ಕಾರ್ಯಕರ್ತರು, ಪ್ರತಿ ವರ್ಷ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಅನುಗುಣವಾಗಿ ಸೌಲಭ್ಯ ಕಲ್ಪಿಸಿಸುವಂತೆ ಒತ್ತಾಯಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣದ ವೇಳೆ ಕೋವಿಡ್‌ ನಿಯಮ ಉಲ್ಲಂಘಿಸಿದ ಕೆಲ ಕೇಂದ್ರ ಸಚಿವರು

ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ: 6 ಮಂದಿ ಸಾವು

ಕಾರು ಅಡ್ಡಗಟ್ಟಿ ಕಾನ್‌ ಸ್ಟೆಬಲ್‌ ಮೇಲೆ ಹಲ್ಲೆ, ಕೊಲೆ ಬೆದರಿಕೆ

ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ: ಬಿಜೆಪಿ ಕಾರ್ಯಕರ್ತರಿಂದ ಪಕ್ಷದ ಕಚೇರಿ ಲೂಟಿ

ನಾಳೆ ಖಾಸಗೀಕರಣ ನೀತಿ ವಿರೋಧಿಸಿ ವಿದ್ಯುತ್‌ ನೌಕರರು ದೇಶವ್ಯಾಪಿ ಪ್ರತಿಭಟನೆ

 

ಇತ್ತೀಚಿನ ಸುದ್ದಿ