ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್‌ಗೆ ಷರತ್ತುಬದ್ಧ ಜಾಮೀನು
ಮಂಗಳೂರು: ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನದಲ್ಲಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪ ಹೊತ್ತು ತಲೆಮರೆಸಿಕೊಂಡಿದ್ದ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್, ಡಿ.20ರಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದರು. ಆ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.
ನಂತರ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ನಿನ್ನೆ ಜಾಮೀನು ಮಂಜೂರು ಮಾಡಿದೆ. ಒಂದೆರಡು ದಿನಗಳಲ್ಲಿ ರಾಜೇಶ್ ಭಟ್ ಜಾಮೀನಿನ ಮೇಲೆ ಬಿಡುಗಡೆಗೊಳ್ಳಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೆಟ್ಟದಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ
ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ
ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ
ಮಹಿಳೆಯರು ಹಾಕುವ ಬಟ್ಟೆಯಿಂದ ಪುರುಷರು ಉದ್ರೇಕವಾಗುತ್ತಾರೆ: ರೇಣುಕಾಚಾರ್ಯ
ದೇವಸ್ಥಾನದಲ್ಲಿ ಭಕ್ತರು ಬ್ರಾಹ್ಮಣರ ಕಾಲು ತೊಳೆಯುವ ಪದ್ಧತಿ: ಕೇರಳ ಹೈಕೋರ್ಟ್ನಿಂದ ಸುಮೋಟೋ ಕೇಸ್ ದಾಖಲು