ಶಿರಾಡಿ ಘಾಟಿಯಲ್ಲಿ ಭೂ ಕುಸಿತ: ಮಣ್ಣಿನಡಿಯಲ್ಲಿ ಸಿಲುಕಿದ ವಾಹನಗಳು!
ಹಾಸನ: ಸತತ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಮಣ್ಣಿನಡಿಯಲ್ಲಿ ಒಂದು ಟ್ಯಾಂಕರ್ ಸೇರಿದಂತೆ 6 ವಾಹನಗಳು ಸಿಲುಕಿವೆ.
ಕಳೆದ 15 ದಿನಗಳಿಂದಲೂ ಈ ಪ್ರದೇಶದಲ್ಲಿ ಭೂ ಕುಸಿತವಾಗುತ್ತಿದೆ. ಇಂದು ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ಕಾರಿನಲ್ಲಿ ಸಂಚರಿಸುತ್ತಿದ್ದವರು ಕೂಡ ಅದರಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇನ್ನೊಂದೆಡೆ ಮತ್ತಷ್ಟು ಮಣ್ಣು ಕುಸಿಯುವ ಆತಂಕ ಸೃಷ್ಟಿಯಾಗಿದೆ. ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97