ಬಂಡೀಪುರದಲ್ಲಿ ಹೈ ಅಲರ್ಟ್: ವಾಹನ ಸಂಚಾರ ನಿರ್ಬಂಧ- ಡ್ರೋನ್ ಹಾರಾಟವೂ ಬಂದ್!
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಖಾಕಿ ಅಲರ್ಟ್ ಆಗಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳನ್ನು ಏಪ್ರಿಲ್ 7ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಬೆಳಗ್ಗೆ 12 ಗಂಟೆಯವರೆಗೆ ಮತ್ತು ಸರ್ಕಾರಿ ವಾಹನ ಸರ್ಕಾರಿ ಬಸ್ಸುಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಏಪ್ರಿಲ್ 8ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಬೆಳಿಗ್ಗೆ 12 ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಆದೇಶ ಹೊರಡಿಸಿದ್ದಾರೆ
ಇನ್ನು, ರಕ್ಷಣಾ ಹಿತದೃಷ್ಠಿಯಿಂದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎಲ್ಲಾ ರೀತಿಯ ಡ್ರೋನ್ ಹಾರಾಟವನ್ನು 9ರವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw