ವಿಮಾನ ನಿಲ್ದಾಣದಲ್ಲಿ 29 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 29 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಜ. 25ರಂದು ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ, ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ತನ್ನ ದೇಹದಲ್ಲಿ ಬಚ್ಚಿಟ್ಟುಕೊಂಡು ಪ್ರಯಾಣಿಸಿರುವುದು ಪತ್ತೆಯಾಗಿದೆ.
584 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 29,14,160ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ
ಸಂವಿಧಾನ ಜಾರಿಗೆ ಬಂದ ದಿನ ಗಣರಾಜ್ಯೋತ್ಸವ
ಕಡಿಮೆ ಬೆಲೆಯ ಚಿನ್ನಾಭರಣ ಖರೀದಿಸಲು ಹೋಗಿದ್ದ ಯುವಕ ಶವವಾಗಿ ಪತ್ತೆ!
ಮಗಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯಿಂದಲೇ ಅತ್ಯಾಚಾರ!
ಬಿಜೆಪಿ – ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ