ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ
ಚೆನ್ನೈ: ಪತಿ ಮತ್ತು ಪತ್ನಿಯರಿಬ್ಬರೂ ತಮ್ಮ 14 ವರ್ಷದ ವಿಶೇಷ ಚೇತನ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆನ್ನೈ ನಗರದ ಅವಡಿ ಎಂಬಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದ ಮೊಹಮದ್ ಸಲೀಂ (44) ಮತ್ತು ಆತನ ಪತ್ನಿ ಸೋಫಿಯಾ (37) ದಂಪತಿ ತಮ್ಮ ಪುತ್ರನನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನಿಗೆ ಮಾತು ಬರುತ್ತಿರಲಿಲ್ಲ ಮತ್ತು ಕಿವಿ ಕೇಳುತ್ತಿರಲಿಲ್ಲ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೂ ಮುನ್ನ ಮೊಹಮದ್ ಸಲೀಂ ತನ್ನ ಸಹೋದರಿ ಸಲೀಮಾಗೆ ಸಂದೇಶವೊಂದನ್ನು ಕಳುಹಿಸಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮಗನ ಸ್ಥಿತಿಯಿಂದ ಪೋಷಕರು ತುಂಬಾ ನೊಂದಿದ್ದು, ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಿಲ್ಪೌಕ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ವಿವಾದ: ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ: ರಾಹುಲ್ ಗಾಂಧಿ
ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕಾಣಿಸಿಕೊಂಡ ಬೆಳಕು: ಮನೆಗೆ ನುಗ್ಗಿ ನೋಡಿದಾಗ ಸತ್ಯ ಬಯಲು
ಶೈಕ್ಷಣಿಕ ಸಾಧನೆಯ ಲೇಡಿ ಸಿಂಗಂ: ಡಾ.ಎನ್.ಲಕ್ಷ್ಮಿ