ವೇಶ್ಯಾವಾಟಿಕೆ ಅಡ್ಡೆಗೆ ದಾಳಿ | ಐವರು ಯುವತಿಯರ ರಕ್ಷಣೆ - Mahanayaka

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ | ಐವರು ಯುವತಿಯರ ರಕ್ಷಣೆ

17/01/2021

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ನಗರ ಪೊಲೀಸರು ಐವರು ಯುವತಿಯರನ್ನು ರಕ್ಷಿಸಿದ್ದು,  ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪುತ್ತೂರು ನೆಕ್ಕಿಲಾಡಿ ನಿವಾಸಿ ಶರಣ್(28), ಬಂಟ್ವಾಳ ಕರಿಯಂಗಳ ನಿವಾಸಿ ಭರತ್(28),  ಪುತ್ತೂರು ಚಿಕ್ಕಮೂಡ್ನೂರು ಗ್ರಾಮ ನಿವಾಸಿ ಕಿರಣ್ ಕೆ(25) ಎಂದು ಗುರುತಿಸಲಾಗಿದೆ.

ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಸಿಬ್ಬಂದಿಯೊಂದಿಗೆ ಖಚಿತ ಮಾಹಿತಿಯೊಂದಿಗೆ ಬಿ.ಸಿ.ರೋಡ್ ನ ಭಾರತ್ ಕಾಂಪ್ಲೆಕ್ಸ್ ನ ತಳಭಾಗದಲ್ಲಿರುವ ಕೊಠಡಿಗೆ ದಾಳಿ ನಡೆಸಿದ್ದು, ಈ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಆರೋಪಿಗಳಿಂದ ರೂ. 4,400 ನಗದು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ