ವಿವಿಧ ಮೋರ್ಚಾಗಳ ಸಮಾವೇಶದ ಮೂಲಕ ಬಿಜೆಪಿಗೆ ಗೆಲುವು: ಬಿ.ವೈ.ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶದ ಮೂಲಕ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಆದ್ದರಿಂದ ಸಮಾವೇಶಗಳ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳ ರಾಜ್ಯ ಪದಾಧಿಕಾರಿಗಳ ಮತ್ತು ಆಹ್ವಾನಿತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಸಮಾವೇಶಗಳು ನಡೆಯಲಿವೆ. ಆಯಾ ಸಮುದಾಯದ, ಸಮಾಜಗಳ ಜನರನ್ನು ಸಂಪರ್ಕಿಸಿ ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಬೇಕು. ಸಾಂಸ್ಕೃತಿಕ, ಕಲಾ ಪ್ರದರ್ಶನದ ಮೂಲಕ ಸಮಾವೇಶ ವೈಶಿಷ್ಟ್ಯಪೂರ್ಣವಾಗಿ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.
ಎಲ್ಲ ವರ್ಗಗಳ, ಎಲ್ಲ ಸಮುದಾಯದ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮೊಹಲ್ಲಾಗಳು, ಕಾಲೋನಿಗಳು ಸೇರಿ ಎಲ್ಲ ವರ್ಗದ ಜನರನ್ನು ಸಂಪರ್ಕಿಸಲು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ತಿಳಿಸಿದರು. ಸಮುದಾಯಗಳ ಮುಖಂಡರು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳು ಸೇರಿದಂತೆ ಸಮಾಜದ ಎಲ್ಲರನ್ನು ಸೇರಿಸಲು ತಿಳಿಸಿದರು.
ಅದ್ಧೂರಿ ಮೆರವಣಿಗೆ, ಬೈಕ್ ರ್ಯಾಲಿ, ಮಹಾಪುರುಷರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡಲು ನಿರ್ಧರಿಸಲಾಯಿತು. ಸಾಂಸ್ಕøತಿಕ ಮೆರುಗನ್ನು ಹೊಂದಿರಬೇಕು. ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಸಮಾವೇಶದಲ್ಲಿ ಭಾಗವಹಿಸಲು ತೀರ್ಮಾನಿಸಲಾಯಿತು.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಗೀತಾ ವಿವೇಕಾನಂದ, ಎಸ್.ಟಿ. ಮೋರ್ಚಾದ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರಬಾಬು, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾಕ್ಟರ್ ಸಂದೀಪ್ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw