ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

09/02/2021

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು. ಆದರೆ ಕೊನೆಯ ಹಂತದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್  ಕಣದಿಂದ ಹಿಂದೆ ಸರಿದರು.

ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್  ಕಣದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಅವರೋಧವಾಗಿ ಆಯ್ಕೆಯಾದರು.

ಇತ್ತೀಚಿನ ಸುದ್ದಿ

Exit mobile version