ಕುಟುಂಬ ರಾಜಕಾರಣ: ವಿಧಾನ ಪರಿಷತ್ ತುಂಬ ರಾಜಕಾರಣಿಗಳ ಕರುಳ ಕುಡಿಗಳು
ಬೆಂಗಳೂರು: ‘ಕುಟುಂಬ ರಾಜಕಾರಣ’ ಎನ್ನುವ ಪದಗಳು ಕರ್ನಾಟಕದ ಪಾಲಿಗೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಕುಟುಂಬ ರಾಜಕಾರಣ ಎಂದ ತಕ್ಷಣವೇ, ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಕಡೆಗೆ ಕೈ ತೋರಿಸುವುದು ಸಾಮಾನ್ಯ. ಆದರೆ, ಕಾಂಗ್ರೆಸ್, ಬಿಜೆಪಿ ಕೂಡ ಕುಟುಂಬ ರಾಜಕಾರಣಕ್ಕೆ ಹೊರತಾಗಿಲ್ಲ.
‘ಕುಟುಂಬ ರಾಜಕಾರಣ’ ಎನ್ನುವು ಯಾಕೆ ಚರ್ಚೆಯಾಗುತ್ತಿದೆಯೋ ಗೊತ್ತಿಲ್ಲ. ಒಂದೇ ಮನೆಯವರು ಒಂದೇ ಪಕ್ಷದಲ್ಲಿ ಗುರುತಿಸಿಕೊಳ್ಳಬಾರದು ಎನ್ನುವ ಕಾನೂನುಗಳಿಲ್ಲವಾದರೂ, ‘ಕುಟುಂಬ ರಾಜಕಾರಣ’ ಎಂಬ ಪದ ಪ್ರಯೋಗ ನಿರಂತರವಾಗಿ ಪ್ರಯೋಗವಾಗುತ್ತಲೇ ಬಂದಿದೆ. ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕುಟುಂಬ ರಾಜಕಾರಣದ ಮಾತುಗಳು ಕೇಳಿ ಬಂದಿವೆ.
ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ 10ಕ್ಕೂ ಅಧಿಕ ಸದಸ್ಯರು ಕುಟುಂಬ ರಾಜಕಾರಣದ ಹಿನ್ನೆಲೆಯಿಂದ ಬಂದವರು ಎಂಬ ಚರ್ಚೆಗಳು ಆರಂಭವಾಗಿದೆ. ಆ ಅಭ್ಯರ್ಥಿಗಳ ವಿವರ ಇಲ್ಲಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ
ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ
ಡಿ.ಎಚ್.ಶಂಕರಮೂರ್ತಿ ಪುತ್ರ ಡಿ.ಎಸ್.ಅರುಣ್
ರಾಜಣ್ಣಪುತ್ರ ಆರ್.ರಾಜೇಂದ್ರ
ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ
ಡಿ.ಕೆ.ಶಿವಕುಮಾರ್ ಸಹೋದರ ಸಂಬಂಧಿ ರವಿ
ಎಂ.ಬಿ.ಪಾಟೀಲ್ ಸಹೋದರ ಸಂಜಯ್ ಪಾಟೀಲ್
ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್
ಕುಟುಂಬ ರಾಜಕಾರಣ ಎಂದೇ ಲೆಕ್ಕ ಹಾಕುವುದಿದ್ದರೂ, ರಾಜ್ಯದ ಪ್ರಮುಖ ನಾಯಕರೇ ಕುಟುಂಬ ರಾಜಕಾರಣದಲ್ಲಿ ತೊಡಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಮಕ್ಕಳು, ಮೊಮ್ಮಕ್ಕಳು ರಾಜಕೀಯಕ್ಕೆ ಧುಮುಕಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಾರಕಿಹೊಳಿ ಕುಟುಂಬ, ಡಿ.ಕೆ.ಶಿವಕುಮಾರ್ ಕುಟುಂಬ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಎಚ್.ಮುನಿಯಪ್ಪ ಹೀಗೆ ದೊಡ್ಡ ದೊಡ್ಡ ನಾಯಕರ ಲಿಸ್ಟ್ ಗಳೇ ಮುಂದುವರಿಯುತ್ತವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು: ಲಾಠಿಚಾರ್ಜ್ ಪ್ರಮಾದ ಮುಚ್ಚಿ ಹಾಕುವ ಪಿತೂರಿ: ಪಾಪ್ಯುಲರ್ ಫ್ರಂಟ್ ಆರೋಪ
ಮೊಟ್ಟೆ ವಿತರಣೆ ಕೈಬಿಡಿ, ಇಲ್ಲವೇ ಪ್ರತ್ಯೇಕ ವೆಜ್- ನಾನ್ ವೆಜ್ ಶಾಲೆ ತೆರೆಯಿರಿ | ದಯಾನಂದ ಸ್ವಾಮೀಜಿ ಒತ್ತಾಯ
ಬಿಜೆಪಿಯವ್ರು ಮಂಚ ಮುರಿಯೋದು, ತೋರಿಸ್ ಬ್ಯಾಡ್ರೀ ಅಂತ ಸ್ಟೇ ತರೋದು | ಸಿಎಂ ಇಬ್ರಾಹಿಂ ವ್ಯಂಗ್ಯ
ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ | ಹೆಚ್.ಡಿ.ಕುಮಾರಸ್ವಾಮಿ
ಡಾನ್ಸ್ ಮಾಡುತ್ತಿದ್ದ ಮಹಿಳಾ ಕಾರ್ಯಕರ್ತೆಯರ ಮೇಲೆ ನೋಟು ಎಸೆದ ಕಾಂಗ್ರೆಸ್ ಕಾರ್ಯಕರ್ತರು | ವಿಡಿಯೋ ವೈರಲ್