ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ

08/02/2021

ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದ್ದು,  ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀರಿಸಲಾಗಿದೆ. ಗೋಹತ್ಯೆ ಮಸೂದೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸದಸ್ಯರು ಮಸೂದೆ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ನಿಷೇಧದಿಂದ ರೈತರು ಹಾಗೂ ಪಶುಸಂಗೋಪನೆ ಮಾಡುವವರಿಗೆ ತೊಂದರೆಯುಂಟಾಗಲಿದೆ ಎಂದು ವಿಪಕ್ಷಗಳು ವಾದಿಸಿದ್ದವು. ಗೋ ಹತ್ಯೆ ನಿಷೇಧಕ್ಕಾಗಿ ಸರ್ಕಾರ ತಂದಿರುವ ಮಸೂದೆಯಿಂದ ಯಾವುದೇ ಪ್ರಯೋಜನವಿಲ್ಲ. ಇದೊಂದು ಚುನಾವಣಾ ಅಸ್ತ್ರವಾಗಿದೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಇತ್ತೀಚಿನ ಸುದ್ದಿ

Exit mobile version