ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
ಬೆಂಗಳೂರು: ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಆರಂಭದ ದಿನವಾದ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸುವ ಮೂಲಕ ಬೆಲೆ ಏರಿಕೆ ವಿರುದ್ಧ ಧ್ವನಿಯೆತ್ತುವ ಸೂಚನೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ತಮ್ಮ ಸದಾಶಿವ ನಗರದ ನಿವಾಸದಿಂದ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದು, ಇನ್ನೊಂದೆಡೆ ಸಿದ್ದರಾಮಯ್ಯ ಹಾಗೂ ಇತರ ನಾಯರು ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಮೂಲಕ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್ , ಡೀಸೆಲ್, ಅಡುಗೆ ಎಣ್ಣೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಕೊವಿಡ್ ನಂತಹ ಸಂದರ್ಭದಲ್ಲಿ ಈ ರೀತಿಯಾಗಿ ಬೆಲೆ ಏರಿಕೆಯಾದರೆ ಜನ ಸಾಮಾನ್ಯರು ಬದುಕುವುದು ಹೇಗೆ? ಎಂದು ಅವರು ಪ್ರಶ್ನಿಸಿದರು.
ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಬೆಲೆ ಏರಿಕೆ ಕಡಿಮೆಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಸರ್ಕಾರಕ್ಕೆ ಬಿಸಿಮುಟ್ಟಿಸಲೆಂದೇ ಎತ್ತಿನ ಗಾಡಿ ಹೋರಾಡ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನಷ್ಟು ಸುದ್ದಿಗಳು…
ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!
ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್
ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!
ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!
ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!