ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ
ಸುರತ್ಕಲ್: ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸಿದೆ.
ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುವ ವೈದ್ಯಕೀಯ ವಿದ್ಯಾರ್ಥಿಗಳು ಮಣಿಪಾಲಕ್ಕೆ ತೆರಳಿ ಬರುವಂತಹ ಹೊತ್ತಿನಲ್ಲಿ ಸುರತ್ಕಲ್ ಬಳಿ ತಡೆದು ಹಲ್ಲೆ ನಡೆಸಿದ ಬಿಜೆಪಿ, ಬಜರಂಗದಳದ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಕಠಿಣ ಕಾನೂನಿನಡಿ ಬಂಧಿಸಿ ಶಿಕ್ಷೆಗೊಳಪಡಿಸುವ ಬದಲು ಕೇವಲ ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವ ಕ್ರಮವನ್ನು ಜಿಲ್ಲೆಯ ಪ್ರಜ್ಞಾವಂತ ಜನ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇದು ಜಿಲ್ಲೆಯ ಕಾನೂನು ಸುವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂಬುದನ್ನು ಎತ್ತಿ ತೋರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಾಗ ನಡೆಯುವಂತಹ ಇಂತಹ ಘಟನೆಗಳನ್ನು ತಡೆಗಟ್ಟಿ ಮತೀಯ ಶಕ್ತಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸ್ ಇಲಾಖೆ ದಯನೀಯ ವೈಫಲ್ಯವನ್ನು ಕಂಡಿದೆ. ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿಗಳು, ಅಕ್ರಮ ಚಟುವಟಿಕೆಗಳು, ಅಕ್ರಮ ಮರಳುಗಾರಿಕೆ, ಇತರೆ ಮಾಫೀಯಾಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಸಂಪೂರ್ಣ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಮತೀಯ ಶಕ್ತಿಗಳ ಅಟ್ಟಹಾಸವನ್ನು ಕಡಿವಾಣ ಮಾಡಲಾಗದಷ್ಟು ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ನೇರ ಹೊಣೆ. ನಿರುದ್ಯೋಗಿ ಯುವಕರನ್ನು ಇಂತಹ ಕ್ರಿಮಿನಲ್, ಅನೈತಿಕ ಕೃತ್ಯಗಳಿಗೆ ಬಳಸಿಕೊಂಡು ಬಿಜೆಪಿ ಪರಿವಾರ ಆಡುವ ಆಟಗಳಿಗೆ ಇನ್ನಾದರು ಕಡಿವಾಣ ಬೀಳಬೇಕು. ಇಲ್ಲದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ದಿಯಲ್ಲಿ ಮತ್ತಷ್ಟು ಹಿನ್ನಡೆ ಸಾಧಿಸುತ್ತದೆ.
ಪೊಲೀಸ್ ಇಲಾಖೆ ಈ ಕೂಡಲೇ ಅನೈತಿಕ ಗೂಂಡಾಗಿರಿ ನಡೆಸಿದ ತಪ್ಪಿತಸ್ಥರನ್ನು ಕಠಿಣ ಸೆಕ್ಷನ್ ಗಳಡಿ ಮರು ಬಂಧಿಸಿ ಜೈಲಿಗಟ್ಟಿ ಶಿಕ್ಷೆಗೊಳಪಡಿಸಲು ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಡಿವೈಎಫ್ ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ
19 ತಿಂಗಳ ರಜೆಯ ಬಳಿಕ 1ರಿಂದ 5ನೇ ತರಗತಿವರೆಗೆ ಶಾಲಾರಂಭದ ಸುಳಿವು!
ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವೆ ಜೊಲ್ಲೆ ವಿರುದ್ಧ ತಿರುಗಿ ಬಿದ್ದ ಗೋಮಾತೆ | ಸಚಿವರಿಗೆ ತಿವಿಯಲು ಯತ್ನ
ಕಡಬ: ಕಾನ್ ಸ್ಟೇಬಲ್ ನಿಂದ ಅತ್ಯಾಚಾರ ಪ್ರಕರಣ | ಇಂದು ನಡೆದ ಬೆಳವಣಿಗೆಗಳೇನು?
ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ
ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ
ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್