ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ - Mahanayaka
6:06 PM Thursday 11 - September 2025

ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ

surathkal
28/09/2021

ಸುರತ್ಕಲ್: ವಾಹನದಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಐವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


Provided by

ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ ಎಂದು ಗುಂಪೊಂದು ಅನಾವಶ್ಯಕವಾಗಿ ತಗಾದೆ ತೆಗೆದಿದ್ದು,  ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿಯೇ, ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ, ಅಸಹ್ಯಕರ ಪದಗಳನ್ನು ಬಳಸಿ ಬಯ್ಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ದೇರಳಕಟ್ಟೆಯ ಕಾಲೇಜೊಂದರ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿರುವ ವೇಳೆ ಧರ್ಮದ ಹೆಸರಲ್ಲಿ ಕೆಲವು ಕಿಡಿಗೇಡಿಗಳು ಅಶಾಂತಿ ಸೃಷ್ಟಿಸಲು ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ದೂರಿನನ್ವಯ ಐದು ಮಂದಿಯನ್ನು ಬಂಧಿಸಲಾಗಿದೆ.

ಪ್ರೀತಂ ಶೆಟ್ಟಿ, ಬಜರಂಗದಳದ ಜಿಲ್ಲಾ ಪ್ರಮುಖ್ ಅರ್ಶಿತ್, ಬಜರಂಗದಳದ ಪ್ರಖಂಡ ಪ್ರಮುಖ್, ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳು ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಬೆಂಗಳೂರಿನಲ್ಲಿ ಕುಸಿದು ಬಿತ್ತು ಮತ್ತೊಂದು 3 ಅಂತಸ್ತಿನ ಹಳೆಯ ಕಟ್ಟಡ!

ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್

ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ!

ಸಮನ್ಸ್ ನೀಡಲು ಬಂದ ಪೊಲೀಸ್ ಕಾನ್ ಸ್ಟೇಬಲ್ ನಿಂದ ಬಾಲಕಿಯ ಅತ್ಯಾಚಾರ

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ಡಿಸಿಪಿಯ ಕಾಲಿನ ಮೇಲೆ ಹರಿದ ಕಾರು!

ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿಯಲ್ಲಿ ಎಸೆದು ಹೋದ ಕಾಮುಕರು

ಇತ್ತೀಚಿನ ಸುದ್ದಿ