ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಕಿಡಿಗೇಡಿ - Mahanayaka

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಕಿಡಿಗೇಡಿ

shivamogga news
07/10/2021

ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯೋರ್ವ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಿಂದ ವರದಿಯಾಗಿದೆ.


Provided by

38 ವರ್ಷ ವಯಸ್ಸಿನ ತೇಜ ಎಂಬಾತ ಈ ಕೃತ್ಯ ನಡೆಸಿದ್ದು, ಈತ ಸಂತ್ರಸ್ತ ಬಾಲಕಿಯ ಸಂಬಂಧಿಕನಾಗಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ ಶನಿವಾರ ಈತ  ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ವೇಳೆ ವಿಡಿಯೋ ಕೂಡ ಮಾಡಿಕೊಂಡಿದ್ದ. ಇದೀಗ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.

ಅತ್ಯಾಚಾರ ನಡೆಸಿದ ಬಳಿಕ, ಈ ವಿಚಾರವನ್ನು ಯಾರಿಗೂ ಹೇಳಬಾರದು. ಹೇಳಿದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಆರೋಪಿಯು ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಘಟನೆ ಸಂಬಂಧ ಆರೋಪಿಯ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಟೈಟ್ ಹಾಫ್ ಜೀನ್ಸ್ ಧರಿಸಿ ಡೇಟ್ ಗೆ ಹೋಗಿದ್ದ ಯುವತಿ ಸಮಸ್ಯೆಗಳಲ್ಲಿ ಸಿಲುಕಿಕೊಂಡಳು!

ಆಸ್ಪತ್ರೆಯಲ್ಲಿ ಬೆಡ್ ಇಲ್ಲ: ಫುಟ್ಪಾತ್ ನಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆ!

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

ಅರ್ಜಿ ನೀಡಲು ಬಂದ ಮಹಿಳೆಗೆ ಕಿರುಕುಳ: ಗ್ರಾ.ಪಂ. ಸದಸ್ಯನ ವಿರುದ್ಧ ದೂರು

2,700 ವರ್ಷದ ಹಳೆಯ ಪುರಾತನ ಐಶಾರಾಮಿ ಶೌಚಾಲಯ ಪತ್ತೆ!

ಮನೆ ಕುಸಿದು 7 ಮಂದಿ ಸಾವು ಪ್ರಕರಣ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಇತ್ತೀಚಿನ ಸುದ್ದಿ