ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಿರುವ ಘಟನೆ ನಡೆದಿದೆ.
ವಿಘ್ನೇಶ್ (40) ಬಂಧಿತ ಅತಿಥಿ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್ ಲೈನ್ ತರಗತಿಗಳ ಮೂಲಕ ನೋಡಿದ್ದ ವಿಘ್ನೇಶ್, ಕಳೆದ ಒಂದು ವರ್ಷದಿಂದ ಆಕೆಗೆ ಅನಗತ್ಯ ಮೊಬೈಲ್ ಸಂದೇಶ ರವಾನಿಸುತ್ತಿದ್ದ. ಈ ವಿಚಾರವನ್ನು ಬಾಲಕಿ ಪ್ರಾಂಶುಪಾಲರಿಗೆ ತಿಳಿಸುವುದಾಗಿ ಎಚ್ಚರಿಕೆ ನೀಡಿದ ಬಳಿಕ ಸಂದೇಶ ರವಾನೆ ನಿಲ್ಲಿಸಿದ್ದ.
ಬಳಿಕ ಕಾಲೇಜು ಅವರಣದಲ್ಲಿಯೇ ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿ ಹಿಂಬಾಲಿಸುತ್ತಿದ್ದ. ಅಲ್ಲದೆ ಈ ಬಗ್ಗೆ ದೂರು ದಾಖಲಿಸದಂತೆ ಯುವತಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.
ಈ ಸಂಬಂಧ ಸಂತ್ರಸ್ಥ ವಿದ್ಯಾರ್ಥಿನಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಳಿಕ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ಷರತ್ತುಬದ್ದ ಜಾಮೀನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ
ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ
ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ
ಬೈಕ್ ಗೆ ಲಾರಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ತಾಯಿ ದಾರುಣ ಸಾವು
ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?