ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ವಿಡಿಯೋ ಮಾಡಿದ ಪತ್ರಕರ್ತ!

hijab
16/02/2022

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪತ್ರಕರ್ತನೋರ್ವ ಬೆನ್ನಟ್ಟಿ ವಿಡಿಯೋ ಸೆರೆ ಹಿಡಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೆಂತಹಾ ಕೃತ್ಯ  ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ತರಗತಿಗೆ ತೆರಳುತ್ತಿದ್ದ ವೇಳೆ ಪತ್ರಕರ್ತ ವಿದ್ಯಾರ್ಥಿನಿಯನ್ನು ಬೆನ್ನಟ್ಟಿ ಬಂದು ವಿಡಿಯೋ ರೆಕಾರ್ಡ್ ಮಾಡಿದ್ದು, ಪತ್ರಕರ್ತ ಅಟ್ಟಿಕೊಂಡು ಬರುತ್ತಿರುವುದನ್ನು ಕಂಡು ಗಾಬರಿಗೊಂಡ ವಿದ್ಯಾರ್ಥಿನಿ ಆತಂಕದಿಂದ ಓಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದೆ.

ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಿ ಸಮಾಜದಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ. ಶಾಲೆಯ ಆವರಣಕ್ಕೆ ನುಗ್ಗಿ ವಿದ್ಯಾರ್ಥಿನಿಯರ ಅನುಮತಿ ಇಲ್ಲದೇ, ಅವರನ್ನು ಅಟ್ಟಾಡಿಸಿ ವಿಡಿಯೋ ಮಾಡಲಾಗುತ್ತಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಲ್ಲವೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

ಕಾರಾಗೃಹದಲ್ಲಿ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ

ಹುಲಿ ಚರ್ಮ ಮಾರಾಟಕ್ಕೆ ಯತ್ನ: ನಾಲ್ವರು ಆರೋಪಿಗಳ ಬಂಧನ

ಕಾವೇರಿ ಹೋರಾಟಗಾರ, ಮಾಜಿ ಶಾಸಕ, ಎಚ್.ಡಿ.ಚೌಡಯ್ಯ ನಿಧನ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ಇನ್ನಿಲ್ಲ

ಇತ್ತೀಚಿನ ಸುದ್ದಿ

Exit mobile version