ವಿದ್ಯಾರ್ಥಿಯ ಜೊತೆಗಿನ ಒಡನಾಟದಿಂದ ಪ್ರಾಣ ಕಳೆದುಕೊಂಡ ಗೃಹಿಣಿ! - Mahanayaka
11:07 AM Wednesday 12 - March 2025

ವಿದ್ಯಾರ್ಥಿಯ ಜೊತೆಗಿನ ಒಡನಾಟದಿಂದ ಪ್ರಾಣ ಕಳೆದುಕೊಂಡ ಗೃಹಿಣಿ!

bangalore
21/10/2021

ಬೆಂಗಳೂರು: ವಿದ್ಯಾರ್ಥಿಯ ಜೊತೆಗಿನ ಗೆಳೆತನ ಮಹಿಳೆಯ ಪ್ರಾಣಕ್ಕೆ ಕುತ್ತುತಂದಿದ್ದು, ಪಿಯುಸಿ ವಿದ್ಯಾರ್ಥಿಯೋರ್ವ ಮಹಿಳೆಯನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಅಫ್ರಿನಾ ಖಾನಂ ಎಂಬವರು ಮೃತ ಮಹಿಳೆಯಾಗಿದ್ದಾರೆ. ಮೃತ ಮಹಿಳೆಯ ಪತಿ ಲಾಲುಖಾನ್ ಅವರು ಆರೋಪಿ ವಿದ್ಯಾರ್ಥಿಯ ಮನೆಯ ಬಳಿಯಲ್ಲಿಯೇ ಮನೆ ಕಟ್ಟಿಸುತ್ತಿದ್ದು, ಹೀಗಾಗಿ ಅಫ್ರಿನಾ ಅವರಿಗೆ ವಿದ್ಯಾರ್ಥಿಯ ಪರಿಚಯವಾಗಿತ್ತು. ಈ ಪರಿಚಯ ಒಡನಾಟಕ್ಕೆ ತಿರುಗಿತ್ತು ಎಂದು ಹೇಳಲಾಗಿದೆ.

ಲಾಲುಖಾನ್ ಅವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಯು ಅಫ್ರಿನಾ ಅವರ ಮನೆಗೆ ಬಂದು ಮಾತನಾಡುತ್ತಿದ್ದು, ಈ ವೇಳೆ ಇಬ್ಬರು ಕೂಡ ಮನೆ ತೊರೆದು ಬೇರೆ ಕಡೆ ವಾಸ ಮಾಡೋಣ ಎಂದು ಅಫ್ರಿನಾ ಒತ್ತಾಯಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿ ನಿರಾಕರಿಸಿ, ತನಗೆ ಹಣಕೊಡುವಂತೆ ಆತ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಈ ವೇಳೆ ಇವರಿಬ್ಬರ ಜಗಳ ತೀವ್ರತೆ ಪಡೆದು ವಿದ್ಯಾರ್ಥಿಯು ಕತ್ತರಿಯಿಂದ ಮನಬಂದಂತೆ ಚುಚ್ಚಿ ಅಫ್ರಿನಾ ಅವರನ್ನು ಹತ್ಯೆ ಮಾಡಿ, ಮೃತದೇಹಕ್ಕೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.


Provided by

ಘಟನೆಯ ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿ, ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  ಬನಶಂಕರಿ ಠಾಣಾ ಪೊಲೀಸರು ಆರೋಪಿಯನ್ನು  ಬಂಧಿಸಿದ್ದು, ತೀವ್ರ ವಿಚಾರಣೆಯ ಬಳಿಕ ಈ ಮಾಹಿತಿ ದೊರೆತಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರದ್ದೇ ದೊಡ್ಡಪಾಲು | ಪ್ರಿಯಾಂಕ್ ಖರ್ಗೆ

ಬಂಧಿಸಲು ಹೋದ ಪೊಲೀಸರಿಗೆ ತಲ್ವಾರ್ ತೋರಿಸಿ ಪರಾರಿಯಾದ ರೌಡಿಶೀಟರ್!

ಹಿಂದೂ ಧರ್ಮೀಯರ ಮೇಲಿನ ದಾಳಿ ವಿರುದ್ಧ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ನಿರ್ಲಜ್ಜ, ನೀಚ ರಾಜಕಾರಣಿಗಳ ಬದಲು ಹಿಂದೂ ಸಂಘಟನೆಗಳಿಗೆ ಬಲ ತುಂಬಿ: ಬಿಜೆಪಿ ವಿರುದ್ಧ ಮುತಾಲಿಕ್ ಪರೋಕ್ಷ  ಕಿಡಿ

ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

“ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್” ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

ಸಿದ್ದರಾಮಯ್ಯ ‘ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್’ ಅನ್ನುತ್ತಿದ್ದಾರೆ | ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಇತ್ತೀಚಿನ ಸುದ್ದಿ