ಚಾರ್ಜ್ ನಿಂದ ಮೊಬೈಲ್ ತೆಗೆಯುವ ವೇಳೆ ವಿದ್ಯುತ್ ಆಘಾತ: ಬಾಲಕ ಸಾವು
ಶಿರಾಡಿ: ವಿದ್ಯುತ್ ಆಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದ್ದು,
ಮೋನಚ್ಚನ್ ಹಾಗೂ ವೀಣಾ ದಂಪತಿಯ ಪುತ್ರ ರೋಫಿನ್ ಮೃತಪಟ್ಟ ಬಾಲಕ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ, ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ನ್ನು ತೆಗೆಯಲು ಮುಂದಾದ ವೇಳೆ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ವಿದ್ಯುತ್ ಶಾಕ್ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ರೋಫಿನ್ ನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆವೇಳೆಗೆ ಬಾಲಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka