ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು: ಮನೆ ದುರಸ್ತಿ ಮಾಡುತ್ತಿದ್ದ ವೇಳೆ ದುರಂತ
ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದ್ದು, ಸೋರುತ್ತಿದ್ದ ಮನೆಯನ್ನು ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಾಲಖಾಂಬಕರ (25) ಹಾಗೂ ಬೆನಕನಹಳ್ಳಿ ನಿವಾಸಿ ವಿಲಾಸ ಗೋಪಾಲ ಅಗಸಗೇಕರ (57) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ನಿರಂತರ ಮಳೆಯಿಂದ ವಿನಾಯಕ ಅವರ ಮನೆ ಸೋರುತ್ತಿತ್ತು. ಛಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಚಾವಣಿ ಮೇಲೆ ಹತ್ತಿದ್ದರು. ಈ ವೇಳೆ ಮನೆ ಮೇಲೆ ಹಾದು ಹೋದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ವೇಳೆ ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್ ತಗುಲಿದ್ದು, ಅವರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka