ವಿಜಯ್ ಮಲ್ಯರ ಆಸ್ತಿ ಮಾರಾಟ ಮಾಡಿ ವಸೂಲಿ ವಿಚಾರ: ಲೆಕ್ಕ ಕೊಡಿ ಎಂದು ಕೋರ್ಟ್ ಮೆಟ್ಟಿಲೇರಿದ ಮದ್ಯದ ದೊರೆ

05/02/2025

ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್​ ಮಲ್ಯ ರ ಭಾರತದಲ್ಲಿನ ಆಸ್ತಿಯನ್ನು ಮಾರಾಟ ಮಾಡಿ 14,131 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಕಳೆದ ಡಿಸೆಂಬರ್‌ ನಲ್ಲಿ ಲೋಕಸಭೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಿಳಿಸಿದ್ದರು. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಜಯ ಮಲ್ಯ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ತೀರ್ಪಿನ ಋಣಭಾರಕ್ಕಿಂತ ಎರಡು ಪಟ್ಟು ಹೆಚ್ಚು ವಸೂಲಿ ಮಾಡಿದರೂ ನಾನು ‘ಅರ್ಥಿಕ ಅಪರಾಧಿ ಎಂದು ಹಣೆ ಪಟ್ಟಿ ಕಟ್ಟಲಾಗಿದೆ ಎಂದು ಆಗಲೇ ಹೇಳಿದ್ದ ವಿಜಯ ಮಲ್ಯ, ಕಿಂಗ್ ಫಿಷರ್ ಏರ್‌ಲೈನ್ಸ್ ನ ಕಂಪನಿಗಳಿಂದ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗೆ ಈಗ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಬ್ಯಾಂಕ್‌ಗಳು, ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ವಿಜಯ್ ಮಲ್ಯ ಪರ ಹಿರಿಯ ವಕೀಲ ಸಾಜನ್ ಪೂವಯ್ಯ ವಾದಿಸಿ, 6200 ಕೋಟಿ ಸಾಲ ಕೊಡಬೇಕಿತ್ತು. 14,000 ಕೋಟಿ ವಸೂಲಾಗಿದೆ. ಎಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಲು ಮನವಿ ಮಾಡಿದರು. ವಾದ ಆಲಿಸಿದ ಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version