ಖ್ಯಾತ ನಟನ ಆರೋಗ್ಯ ಸ್ಥಿತಿ ಗಂಭೀರ | ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲು - Mahanayaka
7:57 PM Thursday 12 - December 2024

ಖ್ಯಾತ ನಟನ ಆರೋಗ್ಯ ಸ್ಥಿತಿ ಗಂಭೀರ | ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲು

19/05/2021

ಚೆನ್ನೈ: ಖ್ಯಾತ ತಮಿಳು ನಟ, ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ವೇಳೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ವಿಜಯಕಾಂತ್ ಅವರಿಗೆ ಕೊರೊನಾ ಸೋಂಕು ತಗಲಿತ್ತು. ಆ ಸಂದರ್ಭದಲ್ಲಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಇತ್ತೀಚಿನ ಸುದ್ದಿ