ಪತ್ನಿಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿರುವ ವಿಜಯರಾಘವೇಂದ್ರ: ಸ್ಪಂದನಾ ಅಂತಿಮ ದರ್ಶನ ಪಡೆದ ಗಣ್ಯರು

spandana
09/08/2023

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ನಿಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿರುವ ವಿಜಯರಾಘವೇಂದ್ರ ಅವರಿಗೆ ಚಿತ್ರ ರಂಗದ ಗಣ್ಯರು, ರಾಜಕೀಯ ನೇತಾರರು ಸಾಂತ್ವಾನ ಹೇಳಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಬಳಿಕ ಸುಮಾರು 4 ಗಂಟೆ ವೇಳೆಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಸ್ಪಂದನಾ ದಿಢೀರ್ ನಿಧನದ ಬಗ್ಗೆ ನೋವು ವ್ಯಕ್ತಪಡಿಸಿದ ನಟ ರಾಘವೇಂದ್ರ ರಾಜ್ ಕುಮಾರ್ ,  ಹೇಗೆ ರಿಯಾಕ್ಟ್ ಮಾಡಬೇಕು ನನಗೆ ತಿಳಿಯುತ್ತಿಲ್ಲ. ಸ್ಪಂದನಾ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ನಟ ವಿಜಯರಾಘವೇಂದ್ರರನ್ನು ನೋಡುವುದಕ್ಕೆ ಕಷ್ಟ ಆಗುತ್ತೆ ಎಂದು ಹೇಳಿದರು.

ವಿಧಾನಸಭೆ ಸಭಾಪತಿ ಯು.ಟಿ.ಖಾದರ್, ಸಚಿವ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್​​​​ ಸಚಿವ ಪ್ರಿಯಾಂಕ್ ಖರ್ಗೆ,  ವಿಕ್ರಮ್ ಸೂರಿ, ಹಿರಿಯ ನಟ, ನಿರ್ಮಾಪಕ ಅರವಿಂದ್, ಶಾಸಕ ಸುನೀಲ್ ಕುಮಾರ್​​​, ​ ಸ್ಪಂದನಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ರಾಜ್ ​​ಕುಮಾರ್​​​​ ಕುಟುಂಬಸ್ಥರು, ನಟಿ ಸುಧಾರಾಣಿ ಕುಟುಂಬ, ಗಾಯಕ ವಿಜಯ ಪ್ರಕಾಶ್, ರಾಘವೇಂದ್ರ ರಾಜ್​ಕುಮಾರ್, ನಟ ಕೋಮಲ್, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್​​​ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version