ಕಳ್ ನನ್ ಮಕ್ಕಳು, ಪೋಲಿ ನನ್ ಮಕ್ಕಳು, ತರ್ಲೆಗಳು: ವಿಜಯೇಂದ್ರ ಆಪ್ತನ ಹೆಸರೇಳದೇ ಸೋಮಣ್ಣ ಚಾಟಿ!! - Mahanayaka
10:10 AM Wednesday 12 - March 2025

ಕಳ್ ನನ್ ಮಕ್ಕಳು, ಪೋಲಿ ನನ್ ಮಕ್ಕಳು, ತರ್ಲೆಗಳು: ವಿಜಯೇಂದ್ರ ಆಪ್ತನ ಹೆಸರೇಳದೇ ಸೋಮಣ್ಣ ಚಾಟಿ!!

somanna
26/03/2023

ಚಾಮರಾಜನಗರ: ತಮ್ಮ ಊರಿನ ದೇಗುಲಕ್ಕೆ ರಥ ನಿರ್ಮಾಣ ಹಾಗೂ ಜೀರ್ಣೋದ್ಧಾರ ಮಾಡದಿದ್ದರೇ ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸುತ್ತೇವೆಂದು ಎಚ್ಚರಿಸಿದ್ದ ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ, ಅಮಚವಾಡಿ ಗ್ರಾಮಸ್ಥರೊಟ್ಟಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸಭೆ ನಡೆಸಿದರು.

ಸಭೆ ಆರಂಭದಿಂದಲೇ ವಿಜಯೇಂದ್ರ ಆಪ್ತ ಹಾಗೂ ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್ ಹೆಸರೇಳದೇ ಪರೋಕ್ಷವಾಗಿ ಹಿಗ್ಗಾಮುಗ್ಗ ಜಾಡಿಸಿದ ಸೋಮಣ್ಣ ಬೆಂಗಳೂರಿನಿಂದ ಬಂದವರು ಬೋರ್ಡ್ ತಂದು ಕೊಟ್ಟರು, ನೀವು ಹಿಡ್ಕೊಂಡ್ರಿ, ಸುಳ್ಳುಗಾರ ಸೋಮಣ್ಣ ಎಂದು ಹೇಳಲು ನಿಮಗೆ ಮನಸಾದರೂ ಹೇಗೆ ಬಂತು, ಕೆಲ ಕಳ್ ನನ್ನ ಮಕ್ಕಳು, ತರ್ಲೆಗಳು ಮಾತು ಕಟ್ಟಿಕೊಂಡು ನನಗೆ ಉಗಿದಿದ್ದೀರಿ ಎಂದು ಗ್ರಾಮಸ್ಥರನ್ನು ತರಾಟೆಗೆ ತೆಗೆದುಕೊಂಡರು.

ದೇವರ ಹೆಸರಿನಲ್ಲಿ ಚಿಲ್ಲರೆ ರಾಜಕೀಯ ಮಾಡಬಾರದು, ದೇವರ ಹೆಸರಲ್ಲಿ ರಾಜಕೀಯ ಮಾಡುವವರು ಹೆಚ್ಚು ದಿನ ಉಳಿಯಲಾರರು, 45 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟು ನನಗೆ ಅವಮಾನ ಆಗಿರಲಿಲ್ಲ ಎಂದು ನೋವು ನೋಡಿಕೊಂಡರು.


Provided by

ಏಕೆ ಈ ನೋವಿನ ಮಾತು:

ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದಲ್ಲಿ 400 ವರ್ಷ ಪುರಾತನವಾದ ವೀರಭದ್ರೇಶ್ವರ ಸ್ವಾಮಿ ದೇಗುಲವಿದೆ. ಈ ಐತಿಹಾಸಿಕ ದೇವಾಲಯ ಶಿಥಿಲಗೊಂಡಿದ್ದು ರಥವೂ ಕೂಡ ಹಾಳಾಗಿದೆ. ಗ್ರಾಮಕ್ಕೆ ಸಚಿವ ಸೋಮಣ್ಣ ಬಂದಿದ್ದ ವೇಳೆ ದೇಗುಲ ಜೀರ್ಣೋದ್ಧಾರ ಮಾಡಲು ಕ್ರಮ ವಹಿಸುತ್ತೇನೆ ಜೊತೆಗೆ ರಥ ಮಾಡಿಸಿಕೊಡುತ್ತೇನೆ ಎಂದು ಸೋಮಣ್ಣ ಭರವಸೆ ಕೊಟ್ಟಿದ್ದರು.

ಆದರೆ, ಸುತ್ತಮುತ್ತಲಿನ ಗ್ರಾಮದ ಒಟ್ಟು 24 ಕೋಮುಗಳ ಮುಖಂಡರು ಸೋಮಣ್ಣ ಅವರನ್ನು ನಗರದಲ್ಲಿ ಮತ್ತು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವೇಳೆ ಅಸೌಜನ್ಯದಿಂದ ನಡೆದುಕೊಂಡು ತಿರಸ್ಕಾರದಿಂದ ಕಂಡರು ಎಂಬುದು ಗ್ರಾಮಸ್ಥರ ಸಿಟ್ಟಾಗಿತ್ತು‌. ಇದರಿಂದಾಗಿ ಗೋ ಬ್ಯಾಕ್ ಸೋಮಣ್ಣ ಎಂದು ಚಳವಳಿ ನಡೆಸಲಾಗುವುದು ಎಂದು ಆಕ್ರೋಶ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸೋಮಣ್ಣ ಗ್ರಾಮಸ್ಥರ ಸಭೆ ನಡೆಸಿ ತಮ್ಮ ನೋವು- ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ