ಡಿಕೆಶಿ ಜೊತೆ ಸೇರಿ ರಮೇಶ್ ಜಾರಕಿಹೊಳಿ ಸಿಟಿ ಮಾಡಿಸಿದ್ದು ವಿಜಯೇಂದ್ರ: ಯತ್ನಾಳ್ ಆರೋಪ

ಬೆಂಗಳೂರು: ಡಿ.ಕೆ.ಶಿವಕುಮಾರ್ ಜೊತೆಗೆ ಸೇರಿ ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದೇ ವಿಜಯೇಂದ್ರ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರ ಆರೋಪ ಮಾಡಿದ್ದಾರೆ.
ಉಚ್ಛಾಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಾನು ಸುಮ್ಮನೆ ಮನೆಯಲ್ಲಿ ಕೂರಲ್ಲ, ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಕೊಡಗಿನವರೆಗೂ ಪ್ರವಾಸ ಮಾಡುತ್ತೇನೆ ಎಂದರು.
ಇವರ ವಿರುದ್ಧ ಹೋರಾಟ ನಿಲ್ಲಿಸಲಲ್ಲ, ಹಿಂದೂಗಳ ರಕ್ಷಣೆಗೆ ರಾಜ್ಯ ಪ್ರವಾಸ ಮಾಡುತ್ತೇನೆ, ಅಪ್ಪಮಕ್ಕಳ ಕುಟುಂಬವನ್ನು ರಾಜಕೀಯದಿಂದ ದೂರ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.
ರಮೇಶ್ ಜಾರಕಿಹೊಳಿ ಸಿಡಿಯನ್ನು ಡಿಕೆಶಿ ಜೊತೆ ಸೇರಿ ವಿಜಯೇಂದ್ರ ಮಾಡಿಸಿದ್ದಾರೆ, ಈಗ ಎದ್ದಿರುವ ಹನಿಟ್ರ್ಯಾಪ್ ನಲ್ಲೂ ಇದೇ ಟೀಮ್ ಇದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7