ನಾಳೆ ವಿಜಯ್ ಪತ್ನಿ ದಕ್ಷಿಣ ಕನ್ನಡ ಜಿಲ್ಲೆ ಮೂಲದ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ
ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
ವಿಜಯ್ ಪತ್ನಿ ಸ್ಪಂದನ ಅವರು ಮೊನ್ನೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ ಎನ್ನಲಾಗಿದೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ.ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ. ಸ್ಪಂದನಾ ದಕ್ಷಿಣ ಕನ್ನಡ ಜಿಲ್ಲೆ ಮೂಲದವರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw