ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ | ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ | ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿ

13/01/2021

ಪಾಟ್ನಾ: ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ , ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ ನೀಡಲಾಗಿದ್ದು, ಸಂತ್ರಸ್ತ ಬಾಲಕಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.  ಈ ಘಟನೆ ಮಧುವಾನಿಯಲ್ಲಿ ನಡೆದಿದ್ದು,  ವಿಕಲಚೇತನ ಬಾಲಕಿ 17 ವರ್ಷದವಳಾಗಿದ್ದಾಳೆ.

ಹೊಲದಲ್ಲಿ ದನ ಮೇಯಿಸುತ್ತಿದ್ದ ಹುಡುಗಿ ಇದ್ದ ಸ್ಥಳಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು  ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದು, ವಿಕಲಚೇತನಳಾಗಿರುವ ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ವಿಫಲವಾಗಿದ್ದಾಳೆ.

ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ಬಳಿಕ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯ ಕಣ್ಣಿಗೆ  ಕೋಲೊಂದನ್ನು ತುರುಕಿದ್ದಾನೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಳದಲ್ಲಿಯೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ಈ ಸಂದರ್ಭ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಂಡ ಸ್ಥಳೀಯರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಬಾಲಕಿಯ ಸ್ಥಿತಿ ಗಂಭಿರವಾಗಿದೆ ಎಂದು ಹೇಳಿದ್ದಾರೆ. ಒಂದು ಕಣ್ಣನ್ನು ಸಂಪೂರ್ಣವಾಗಿ ಬಾಲಕಿ ಕಳೆದುಕೊಂಡಿದ್ದಾಳೆ. ಇನ್ನೊಂದು ಕಣ್ಣಿಗೆ ಗಂಭೀರವಾಗಿ ಗಾಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಸಹೋದರನ ಹೇಳಿಕೆಯ ಆಧಾರದಲ್ಲಿ  ಓರ್ವ ಶಂಕಿತನನ್ನು ಬಂಧಿಸಲಾಗಿದೆ.  ಬಾಲಕಿ ವಿಕಲಚೇತನಳಾಗಿದ್ದರಿಂದಾಗಿ ಈತನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಈ ಘಟನೆ ದೇಶಾದ್ಯಂತ ಭಾರೀ ಆಕ್ರೋಶ ಸೃಷ್ಟಿಸಿದೆ. ಬಾಲಕಿ ಬಡ ಕುಟುಂಬದಳಾಗಿರುವುದರಿಂದಾಗಿ ದೇಶದಲ್ಲಿ ನಿರ್ಭಯ ಪ್ರಕರಣಕ್ಕೆ ನೀಡಿದಷ್ಟು ಮಹತ್ವ ಈ ಪ್ರಕರಣಕ್ಕೆ ನೀಡಲಾಗಿಲ್ಲ.

ಇತ್ತೀಚಿನ ಸುದ್ದಿ

Exit mobile version