ಅಂಬಲಪಾಡಿ ಗ್ರಾಪಂ ಕಚೇರಿಯೊಳಗೆ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ
ಉಡುಪಿ: ನೀರು ಪೂರೈಸುವಂತೆ ಒತ್ತಾಯಿಸಿ ಕಿದಿಯೂರು ದಿಡ್ಡಿ ಗ್ರಾಮಸ್ಥರು ಇಂದು ಅಂಬಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಯೊಳಗೆ ಧರಣಿ ನಡೆಸಿದರು.
ಸಮಪರ್ಕ ನೀರು ಪೂರೈಸದ ಗ್ರಾಪಂ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಪಾನ ಹಿಡಿದುಕೊಂಡು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷರು ಹಾಗೂ ಪಿಡಿಓ ಆಗಮಿಸಿ ನೀರಿನ ಸಮಸ್ಯೆ ಪರಿಹರಿಸಿ ಕೊಡುವಂತೆ ಒತ್ತಾಯಿಸಿದ ಅವರು, ಕಚೇರಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದು ಕೊಂಡರು.
‘ ಸುಮಾರು 80 ಮನೆಯವರು ಕಳೆದ ಎರಡು ತಿಂಗಳಿನಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಪಂನವರು ಇದಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರತಿಭಟನಕಾರರು ದೂರಿದರು. ಬಳಿಕ ಕಚೇರಿಗೆ ಆಗಮಿಸಿದ ಗ್ರಾಪಂ ಅಧ್ಯಕ್ಷೆ ರೋಹಿಣಿ ಹಾಗೂ ಪ್ರತಿಭಟನಕಾರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡುವುದಾಗಿ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರಂಜನ್ ಕಿದಿಯೂರು, ಜನಾರ್ದನ ಕಿದಿಯೂರು, ಯತಿರಾಜ್ ಕಿದಿಯೂರು, ದೇವರಾಜ್ ಕಿದಿಯೂರು, ಶಾರದಾ ಪೂಜಾರ್ತಿ, ಸುಮತಿ ಕಿದಿಯೂರು, ಅಂಬಾ, ಗೀತಾ, ವಿಜಯ, ಸತ್ಯವತಿ, ವಿಠಲ ಕರ್ಕೇರ ಮೊದಲಾದವರು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw