ಸಿ.ಟಿ.ರವಿ ಬೆಂಬಲಿಗರು ಹಂಚಿದ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು!
ಚಿಕ್ಕಮಗಳೂರು: ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್….? ನೀಡಲಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಯುಗಾದಿ ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರು ಸೀರೆ ಹಂಚಿಕೆ ಮಾಡಿದ್ದು, ಈ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು ಶಾಸಕ ಸಿ.ಟಿ.ರವಿ ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿ ಗ್ರಾಮದಲ್ಲಿ ಸೀರೆ ಹಂಚಿಕೆ ಆರೋಪ ಕೇಳಿ ಬಂದಿದೆ. ಕಳೆದ ರಾತ್ರಿ ಬಿಜೆಪಿ ಮುಖಂಡರು ಸೀರೆ ಹಂಚಿಕೆ ಮಾಡಿದ್ದರು ಎನ್ನಲಾಗಿದೆ.
ಕೊರೋನಾ ವೇಳೆ 1 ಕೆ.ಜಿ. ಅಕ್ಕಿ ಕೊಡುವ ಯೋಗ್ಯತೆಯಿಲ್ಲ, ಈಗ ಸೀರೆ ಹಂಚಿಕೆ ಮಾಡ್ತೀರಾ? ನಮ್ಮ ಊರಿಗೆ ಯಾವುದೇ ಸೌಲಭ್ಯ ಆಗಿಲ್ಲ, ಈ ಸಾರಿ ಬಿಟ್ಟರೆ ಬೇರೆ ಯಾವುದೇ ಸೌಲಭ್ಯ ನಮಗೆ ಸಿಕ್ಕಿಲ್ಲ, ಎಲೆಕ್ಷನ್ ಬಂತು ಅಂತ ಸೀರೆ ಹಂಚಿಕೆ ಮಾಡ್ತೀರಾ ಎಂದು ಶಾಸಕ ಸಿ.ಟಿ.ರವಿ ಬೆಂಬಲಿಗರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw