ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುತ್ತವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿಯ ಹೇಳಿಕೆ - Mahanayaka

ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುತ್ತವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿಯ ಹೇಳಿಕೆ

g parameshwar
07/04/2025

ಬೆಂಗಳೂರು : ಸದ್ದುಗುಂಟೆಪಾಳ್ಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡಿರುವ ಘಟನೆ ನಡೆದಿದೆ.


Provided by

ಇಂತಹ ಘಟನೆಗಳು ದೊಡ್ಡ ನಗರದಲ್ಲಿ ಹೆಚ್ಚಾಗಿ ಸಂಭವಿಸುತ್ತವೆ. ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವಾಗ ಮಹಿಳೆಯರ ಮೇಲೆ ಕಿರುಕುಳ ನಡೆಯುತ್ತಿರುತ್ತದೆ ಎಂದು ಗೃಹ ಸಚಿವ ಡಾ ಜಿ. ಪರಮೇಶ್ವರ್ ನಿರ್ಲಕ್ಷ್ಯತನದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಇಂತಹ ಘಟನೆಗಳು ಇಲ್ಲಿ ಮತ್ತು ಅಲ್ಲಿ ನಡೆಯುತ್ತವೆ. ಯಾವುದೇ ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಕಾನೂನಿನ ಪ್ರಕಾರ ಮಾಡಲಾಗುತ್ತದೆ. ಬೀಟ್ ಗಸ್ತು ಹೆಚ್ಚಿಸುವಂತೆ ನಮ್ಮ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಪರಮೇಶ್ವರ್ ಹೇಳಿದ್ದಾರೆ.


Provided by

ಸದ್ದುಗುಂಟೆಪಾಳ್ಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಈ ಬಗ್ಗೆ  ಪ್ರತಿಕ್ರಿಯಿಸಿದ್ದು, ಈ ವಿಷಯದ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಬಿಎನ್‌ಎಸ್‌ನ ಸೆಕ್ಷನ್ 74, 75, 78 ರ ಅಡಿಯಲ್ಲಿ ಎಫ್‌ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ