ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಪಡೆದು ಮನೆಗೆ ಬಂದ ಬಳಿಕ ಸಾವು! - Mahanayaka
9:18 AM Tuesday 24 - December 2024

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಪಡೆದು ಮನೆಗೆ ಬಂದ ಬಳಿಕ ಸಾವು!

verajapete
18/10/2021

ವೀರಾಜಪೇಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ತಮ್ಮ ಮನೆಗೆ ಮರಳಿದ ಬಳಿಕ ಅವರು ಮೃತಪಟ್ಟ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ವೀರಾಜಪೇಟೆ(Verajapete) ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಅರ್ವತೊಕ್ಲು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ 28 ವರ್ಷದ ರಮ್ಯಾ ಎಂಬವರು ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ನಾಲ್ಕು ದಿನಗಳ ಹಿಂದೆ ರಮ್ಯಾ(Ramya) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಅವರನ್ನು ತಕ್ಷಣವೇ ವೀರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿತ್ತು.

ವರದಿಗಳ ಪ್ರಕಾರ ನಿನ್ನೆಯಷ್ಟೇ ರಮ್ಯಾ ಅವರು, ಡಿಸ್ಚಾರ್ಜ್ ಆಗಿ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಏಕಾಏಕಿ ಹೊಟ್ಟೆ ನೋವು ಉಲ್ಬಣಗೊಂಡಿದ್ದು, ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ವಿವಾಹಿತ ಮಹಿಳೆ ಪ್ರಿಯಕರನ ಮನೆಯಲ್ಲಿ ನೇಣಿಗೆ ಶರಣು

ಉಪ ಚುನಾವಣೆ ಮುಗಿದ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ್ ಬೊಮ್ಮಾಯಿ

ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಧಾರ್ಮಿಕ ಬಲಾತ್ಕಾರ:  ಚರ್ಚ್ ಗೆ ನುಗ್ಗಿ ದುರ್ನಡತೆ ತೋರಿದ ಬಿಜೆಪಿ ಪರಿವಾರ

ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು

KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್

ಸಿಎಂ ಬೊಮ್ಮಾಯಿ ಅವರನ್ನು ನೋಡಲು ಬಂದ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ!

ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!

ಇತ್ತೀಚಿನ ಸುದ್ದಿ