ವಿಷ ಸೇವಿಸಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವು
ಮುಂಬೈ: ಸಾಮೂಹಿಕ ಅತ್ಯಾಚಾರದಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷ ವಯಸ್ಸಿನ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದಿದೆ.
ಸೆ.12ರಂದು ಸೋನೆಪತ್ ಎಂಬಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಘಟನೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರವಾಗಿ ಝರ್ಜರಿತಳಾಗಿದ್ದ ಬಾಲಕಿ ಘಟನೆ ನಡೆದು ಎರಡು ದಿನ(ಸೆ.14ರಂದು)ಗಳ ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ತೀವ್ರವಾಗಿ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ(ಸೆ.18ರಂದು) ಪೊಲೀಸರಿಗೆ ಆಕೆ ಹೇಳಿಕೆ ನೀಡಿದ್ದು, ಅತ್ಯಾಚಾರದಿಂದ ನೊಂದು ತಾನು ವಿಷ ಸೇವಿಸಿದೆ ಎಂದು ಹೇಳಿದ್ದಾಳೆ. ಆದರೆ, ಇದಾದ ಬಳಿಕ ಸಂತ್ರಸ್ತೆಯು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ ಮೃತಪಟ್ಟಿದ್ದಾಳೆ.
ಇನ್ನೂ ದುಷ್ಕೃತ್ಯ ಎಸಗಿದ್ದ ಮೂವರು ಆರೋಪಿಗಳು ಕೂಡ ಎರಡು ವರ್ಷಗಳಿಂದ ಬಾಲಕಿಯ ಹಿಂದೆ ಬಿದ್ದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇದೀಗ ಸಂತ್ರಸ್ತೆಯ ಹೇಳಿಕೆಯ ದಾಖಲೆಯ ಮೂಲಕ ಪೊಲೀಸರು ಮೂವರು ಆರೋಪಿಗಳ ಮೇಲೆ ಐಪಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ಕಡಲತೀರದಲ್ಲಿ ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ
ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು
ಕೋಲಾರ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್
ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?
ಗೋಶಾಲೆಗಳನ್ನೇ ಮಾಂಸ ಮಾರಾಟ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ | ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ
ದೆವ್ವ ಬಿಡಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು 16ರ ಬಾಲಕಿಯ ಮೇಲೆ ಸಾಧುವಿನಿಂದ ಅತ್ಯಾಚಾರ!
2 ವರ್ಷದ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ: ಕ್ರಮಕೈಗೊಳ್ಳುವ ತಾಕತ್ ಇಲ್ಲದೇ ಭಾಷಣ ಬಿಗಿದು ಹೋದ ಅಧಿಕಾರಿಗಳು