ಕಿಡಿಗೇಡಿಗಳಿಂದ ನಟ ವಿಷ್ಣುವರ್ಧನ್ ಪ್ರತಿಮೆ ಧ್ವಂಸ

26/12/2020

ಬೆಂಗಳೂರು: ನಟ ವಿಷ್ಣುವರ್ಧನ್ ಅವರ ಬಗ್ಗೆ ಇತ್ತೀಚೆಗಷ್ಟೆ ತೆಲುಗು ನಟನೋರ್ವ ನೀಡಿದ್ದ ಹೇಳಿಕೆಯ ಕಾರಣಕ್ಕಾಗಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

ಇಲ್ಲಿನ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯಿರುವ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಜಮಾವಣೆಗೊಂಡಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಜನ ಒತ್ತಾಯಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಅವರ ಪ್ರತಿಮೆ ಇಲ್ಲಿ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಇವರ ಪ್ರತಿಮೆಯನ್ನು ಹೊತ್ತೊಯ್ದಿದ್ದರು. ಇದೀಗ ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ್ ಪಾಟೀಲ್ ಬರಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಸಚಿವ ಸೋಮಣ್ಣ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಮೆ ಮರುಸ್ಥಾಪನೆ ಮಾಡುವ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version