ವಿಶ್ವ ಯುದ್ಧದ ನಂತರ ಮೊದಲನೆ ಬಾರಿಗೆ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ - Mahanayaka
1:13 AM Wednesday 11 - December 2024

ವಿಶ್ವ ಯುದ್ಧದ ನಂತರ ಮೊದಲನೆ ಬಾರಿಗೆ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

yesu
09/03/2022

ಕೀವ್: ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರುವಂತೆಯೇ, ಎಲ್ವಿವ್‍ನ ಅರ್ಮೇನಿಯನ್ ಕ್ಯಾಥೆಡ್ರಲ್‍ನಲ್ಲಿರುವ ಯೇಸುಕ್ರಿಸ್ತನ ಶಿಲ್ಪವನ್ನು ಸ್ಥಳಾಂತರ ಮಾಡಲಾಗಿದೆ ಎಂದು ಪೂರ್ವ ಯುರೋಪಿಯನ್ ಮಾಧ್ಯಮ ಸಂಸ್ಥೆ ನೆಕ್ಸ್‌ಟಾ ವರದಿ ಮಾಡಿದೆ.

ವಿಶ್ವ ಸಮರ 2ರ ಸಮಯದಲ್ಲಿ ಕ್ಯಾಥೆಡ್ರಲ್ ಚರ್ಚ್‍ನಿಂದ ಕೊನೆಯ ಬಾರಿಗೆ ಈ ಏಸುಕ್ರಿಸ್ತನ ಪ್ರತಿಮೆಯನ್ನು ಸ್ಥಳಾಂತರಿಸಲಾಗಿತ್ತು. ಫೆ. 24ರಂದು ರಷ್ಯಾ ಉಕ್ರೇನಿಯನ್ ನಗರಗಳನ್ನು ಆಕ್ರಮಿಸಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಫೆ. 24ರಂದು ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ್ದು, ಅಂದಿನಿಂದ ರಷ್ಯಾ ಸೇನೆ ನೂರಾರು ಕ್ಷಿಪಣಿ ಮತ್ತು ಫಿರಂಗಿ ದಾಳಿಗಳನ್ನು ದೇಶಾದ್ಯಂತ ಮತ್ತು ಇತರ ಸೈಟ್‍ಗಳ ಮೇಲೆ ನಡೆಸಿವೆ.

ದಾಳಿಯಿಂದ ಕನಿಷ್ಠ 331 ನಾಗರಿಕರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಲಾಗಿದೆ. ಆದರೆ ನಿಜವಾದ ಸಂಖ್ಯೆ ಹೆಚ್ಚು ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಹೇಳಿದೆ. ಇದರ ಮಧ್ಯೆ 1.5 ದಶಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್‍ನಿಂದ ಪಲಾಯನ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ದಾಳಿ: ಕುಡಿಯಲು ನೀರು ಸಿಗದೆ ಜೀವ ಬಿಟ್ಟ ಅನಾಥ ಬಾಲಕಿ

ರಷ್ಯಾದಲ್ಲಿ ಮೆಕ್‌ ಡೊನಲ್ಡ್‌, ಪೆಪ್ಸಿ, ಕೊಕಾ-ಕೊಲಾ ಕಂಪೆನಿಗಳಿಂದ ವಹಿವಾಟು ಸ್ಥಗಿತ

ರಷ್ಯಾದ ತೈಲ, ಅನಿಲ ಆಮದುಗಳ ಮೇಲೆ ನಿಷೇಧ ಘೋಷಿಸಿದ ಅಮೆರಿಕ : ಜೋ ಬೈಡನ್

ಉಕ್ರೇನ್‌ ನಲ್ಲಿ ಶೆಲ್ ದಾಳಿ ನಿಂತ ಬಳಿಕ ನವೀನ್ ಮೃತದೇಹ ತರುವ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ