ಕೆರೆಗೆ ಹಾರಿ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖ - Mahanayaka
10:16 AM Thursday 12 - December 2024

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖ

nishmitha vittal
11/10/2021

ಬಂಟ್ವಾಳ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ( Vittal )ದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬಾಲಕಿಯ ಡೆತ್ ನೋಟ್ ಕೂಡ ಪತ್ತೆಯಾಗಿದೆ ಎಂದು ವರದಿಯಾಗಿದೆ.

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪದ ಮನೆಯಲ್ಲಿ ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಟ್ಲ ಕಸಬಾ ಗ್ರಾಮದ ನೇತ್ರಕೆರೆ ನಿವಾಸಿ  22 ವರ್ಷ ವಯಸ್ಸಿನ ನಿಶ್ಮಿತಾ ಆತ್ಮಹತ್ಯೆಗೆ ಶರಣಾಗಿರುವ ಯುವತಿ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು,  ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ದೊರೆತಿದೆ. ಯುವತಿ ಬರೆದಿರುವ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಶರಣಾಗಿರುವ ನಿಶ್ಮಿತಾ ಇಲ್ಲಿನ ಡೆಂಟಲ್ ಕ್ಲೀನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.  ಇದೀಗ ಯುವತಿಯ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಭೂಮಿ ಕಂಪಿಸಿದ ಭಯಾನಕ ಅನುಭವ: ರಾತ್ರಿ ಇಡೀ ನಿದ್ದೆ ಮಾಡದೇ ದಿನ ಕಳೆದ ಜನ

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!

KSRTC ಬಸ್  ಮತ್ತು ಆಟೋ ಡಿಕ್ಕಿ: ಮದುಮಗ ಸೇರಿದಂತೆ ಮೂವರ ದಾರುಣ ಸಾವು

ಮೋದಿ ಸರ್ಕಾರ ಕಾರ್ಮಿಕ, ರೈತ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ | CPIM ಮುಖಂಡ ವಸಂತ ಆಚಾರಿ

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ