ಇನ್ ಸ್ಟಾಗ್ರಾಮ್ ಪರಿಚಯವಾದಾತನಿಂದ ವಿವಾಹಿತ ಮಹಿಳೆಯ ಅತ್ಯಾಚಾರ! - Mahanayaka
12:01 AM Tuesday 10 - December 2024

ಇನ್ ಸ್ಟಾಗ್ರಾಮ್ ಪರಿಚಯವಾದಾತನಿಂದ ವಿವಾಹಿತ ಮಹಿಳೆಯ ಅತ್ಯಾಚಾರ!

instagram
13/07/2021

ಬಂಟ್ವಾಳ: ವಿವಾಹಿತ ಮಹಿಳೆಯನ್ನು ಅತ್ಯಾಚಾರ ನಡೆಸಿ ಬೆದರಿಕೆ ಹಾಕಿರುವ ಆರೋಪದಲ್ಲಿ ಬಂಧಿಸಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಅಯ್ಯೂಬ್ ಬಂಧಿತ ಆರೋಪಿಯಾಗಿದ್ದು, ಈತ ತಲಪಾಡಿಯ ವಿವಾಹಿತ ಮಹಿಳೆಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದು, ಬಳಿಕ ನಾನು ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆಂದು ಪೀಡಿಸುತ್ತಿದ್ದು, ಇದನ್ನು ವಿರೋಧಿಸಿದಾಗ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಮಹಿಳೆ ಬಿ.ಸಿ.ರೋಡ್ ಗೆ ಬಂದ ವೇಳೆ ತನ್ನ ಕಾರಿನಲ್ಲಿ ಮಹಿಳೆಯನ್ನು ಬಲವಂತವಾಗಿ ಕೂರಿಸಿ ಮಂಗಳೂರು ಭಾಗದಲ್ಲಿ ಸುತ್ತಾಡಿಸಿ, ಮೊಬೈಲ್ ನಲ್ಲಿ ಮಹಿಳೆಯ ಫೋಟೋ ತೆಗೆದಯ ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ ಎಂದು ಆರೋಪಿಸಲಾಗಿದೆ.

ಇನ್ನೂ ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದು, ಈ ವಿಚಾರ ಯಾರಿಗೂ ಹೇಳಬಾರದು ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಆಪಾದಿಸಿದ್ದಾರೆ.

ಮಹಿಳೆಯ ದೂರಿನನ್ವಯ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ನಗರ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು:

 

ಮಿಸ್ಡ್ ಕಾಲ್ ನಿಂದ ಆರಂಭವಾದ ಪ್ರೀತಿ, ಅತ್ಯಾಚಾರದಲ್ಲಿ ಕೊನೆಯಾಯ್ತು!

ಸೊಸೆಯನ್ನು ಚೈನ್ ನಲ್ಲಿ ಕಟ್ಟಿ ಹಾಕಿ ನಡು ರಸ್ತೆಯಲ್ಲಿ ಮಾವನಿಂದಲೇ ಹೀನ ಕೃತ್ಯ!

ನೆರೆಮನೆಯ ವ್ಯಕ್ತಿಯಿಂದಲೇ 5 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ

ಎಮ್ಮೆ ಮೇಯಿಸುತ್ತಿದ್ದ ವೇಳೆ ಅತ್ಯಾಚಾರಕ್ಕೆ ಯತ್ನ | ಕಾಮುಕರಿಂದ ಮಹಿಳೆಯನ್ನು ರಕ್ಷಿಸಿದ ಎಮ್ಮೆ

ಇತ್ತೀಚಿನ ಸುದ್ದಿ