ಸರ್ಕಾರಿ ಶಾಲೆ ದತ್ತು ಪಡೆಯದ ಶಾಸಕರನ್ನು ಮತದಾರರು ಪ್ರಶ್ನಿಸಬೇಕು: ಪ್ರೊ.ಎಂ.ಆರ್. ದೊರೆಸ್ವಾಮಿ
ಶಾಸಕರು, ವಿಧಾನ ಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ನೀಡಿದ್ದ ಶಿಫಾರಸನ್ನು 2020–21ರ ರಾಜ್ಯ ಬಜೆಟ್ ನಲ್ಲಿ ಸೇರಿಸಲಾಗಿದ್ದರೂ, ಶೇಕಡಾ 10ರಷ್ಟು ಜನಪ್ರತಿನಿಧಿಗಳು ಮಾತ್ರ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದರು.
ಅವರು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಶಾಸಕರು ಮುಂಬರುವ ಚುನಾವಣೆಯಲ್ಲಿ ಮತ ಕೇಳಲು ಬಂದಾಗ ಮತದಾರರು ಅವರನ್ನು ಪ್ರಶ್ನಿಸಬೇಕು ಎಂದರು. 224 ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಈ ಸಂಬಂಧ ಪತ್ರ ಬರೆದು ಗಮನ ಸೆಳೆದಿದ್ದೇನೆ.
ಆದರೆ, ಬೆರಳೆಣಿಕೆ ಶಾಸಕರು ಸರ್ಕಾರಿ ಶಾಲೆ ದತ್ತು ಪಡೆದು, ಅಭಿವೃದ್ಧಿಗೊಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದಲ್ಲಿ ಕೆಲ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ 48 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಶೇಕಡಾ 40ರಷ್ಟು ಶಾಲೆಗಳಲ್ಲಿ ಕುಡಿಯುವ ನೀರು, ಕಾಂಪೌಂಡ್ ಸೌಲಭ್ಯ ಇಲ್ಲ. ಶೇಕಡಾ 30ರಷ್ಟು ಶಾಲೆಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಸ್ವತಃ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ.
ರಾಜ್ಯ ಸರ್ಕಾರವು ಮುಂಬರುವ ಬಜೆಟ್ ನಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ₹10ಸಾವಿರ ಕೋಟಿ ಮೊತ್ತವನ್ನು ಮೀಸಲಿಟ್ಟು, ಏಕಕಂತಿನಲ್ಲಿ ಬಿಡುಗಡೆಗೊಳಿಸಿ, ಶಾಲೆಗಳ ಅಭಿವೃದ್ಧಿಗೆ ಆಸಕ್ತಿ ತೋರಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳ ಹಿಂದೆ 18 ಶಿಫಾರಸುಗಳನ್ನು ನೀಡಲಾಗಿತ್ತು. ಅದರಲ್ಲಿ ಕೆಲವು ಮಾತ್ರ ಅನುಷ್ಠಾನಗೊಂಡಿವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw