ಉಡುಪಿ ಜಿಲ್ಲೆಯಲ್ಲಿ ಮತದಾನ ಆರಂಭ: ಹಕ್ಕು ಚಲಾಯಿಸಿದ ಅಭ್ಯರ್ಥಿಗಳು
ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಬಾರಿ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿದರು
ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವುದು ಕಂಡುಬಂತು.
ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹಾಗೂ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತನ್ನ ಪತ್ನಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಲ್ಲಿ ಮತದಾನ ಮಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜಘಂಟಿಹಳೆ ಸಾರಥಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಪತ್ನಿ ಹಾಗೂ ಕುಟುಂಬಿಕರೊಂದಿಗೆ ಆಗಮಿಸಿ ಕನ್ಯಾನ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಕುಕ್ಕುಂದೂರು ಗ್ರಾಮ ಪಂಚಾಯತ್ ಕಚೇರಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw