ಮತ ಕೇಂದ್ರದೊಳಗೆ ಮೊಬೈಲ್ ನಿಷೇಧಿಸಿದ್ದರೂ, ಮತದಾನ ಮಾಡುವ ವಿಡಿಯೋ ವೈರಲ್!
ಉಡುಪಿ: ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ಮಧ್ಯೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವ ಬಗ್ಗೆ ವರದಿಯಾಗಿದೆ.
ವಿಡಿಯೋವೊಂದರಲ್ಲಿ ಮತದಾರ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರಿಗೆ ಜೈ ಬಜರಂಗಿ ಎಂದು ಹೇಳಿ ಮತದಾನ ಮಾಡುತ್ತಿರುವುದು ಕಂಡುಬಂದಿದೆ. ಮತ್ತೊಂದು ವಿಡಿಯೋದಲ್ಲಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತ ಹಾಕಿ ತನ್ನ ಮುಖವನ್ನು ಕೂಡ ಮತದಾರ ತೋರಿಸಿರುವುದು ಕಂಡುಬಂದಿದೆ.
ಇದೀಗ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ನಿಷೇಧ ಇದೆಯೇ ಇಲ್ಲವೇ ಎಂಬ ಪ್ರಶ್ನೆ ಸಾಮಾನ್ಯ ಜನರನ್ನು ಕಾಡು ತ್ತಿದೆ. ಇವರಿಗೆ ವಿಡಿಯೋ ರೆಕಾರ್ಡ್ ಮಾಡಲು ಮತಗಟ್ಟೆ ಅಧಿಕಾರಿಗಳು ಹೇಗೆ ಅವಕಾಶ ಮಾಡಿಕೊಟ್ಟರು ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ.
ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧಿಸಿರುವ ಜಿಲ್ಲಾಧಿಕಾರಿಗಳ ಆದೇಶದ ಸ್ಪಷ್ಟ ಉಲ್ಲಂಘನೆ ಇದಾಗಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರಿಂದ ಒತ್ತಾಯಗಳು ಕೇಳಿಬರುತ್ತಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw