ಇದೆಂತಹಾ ದುರ್ದೈವ!: ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆ ಸಾವು
ಉಡುಪಿ: ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಉಪ್ಪೂರು ತೆಂಕಬೆಟ್ಟುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
62ವರ್ಷದ ಸುಲೋಚನವ್ವ ಮೃತದುರ್ದೈವಿ. ಇವರು ತೆಂಕಬೆಟ್ಟುವಿನ ಅಖಿಲ್ ಶೆಡ್ತಿಯವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಅಖಿಲ್ ಶೆಟ್ಟಿಯವರ ತಾಯಿ ಆರೋಗ್ಯ ವಿಚಾರಿಸಲು ಬಂದಿದ್ದು, ರಾತ್ರಿ ಅಲ್ಲಿಯೇ ತಂಗಿದ್ದರು.
ಬೆಳಿಗ್ಗೆ ಶೌಚಾಲಯಕ್ಕೆ ಹೋದವರು ಆಯತಪ್ಪಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಬ್ರಹ್ಮಾವರದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸುಲೋಚನವ್ವ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka