ಕಾಲು ಜಾರಿ ಬಿದ್ದು ಗಾಯಗೊಂಡ ವೃದ್ಧೆಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ ಮಗ-ಸೊಸೆ! - Mahanayaka

ಕಾಲು ಜಾರಿ ಬಿದ್ದು ಗಾಯಗೊಂಡ ವೃದ್ಧೆಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ ಮಗ-ಸೊಸೆ!

senior citizen
07/07/2022

ಬಂಟ್ವಾಳ: ಮನೆಯ ಜಗುಲಿಯಲ್ಲಿ ಕಾಲು ಜಾರಿ ಬಿದ್ದ 70ರ ವೃದ್ಧೆಗೆ ಚಿಕಿತ್ಸೆ ಕೊಡಿಸದೇ,  ಸರಿಯಾಗಿ ಊಟ, ತಿಂಡಿ ನೀಡದೇ ಮಗ ಹಾಗೂ ಸೊಸೆ, ಶೌಚಾಲಯದಲ್ಲಿ ಕೂಡಿ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಿಗೆಯಲ್ಲಿ ನಡೆದಿದೆ.


Provided by

70 ವರ್ಷ ವಯಸ್ಸಿನ ಗಿರೀಜಾ ಅವರು ಸಂತ್ರಸ್ತ ವೃದ್ಧೆಯಾಗಿದ್ದು, ತಮ್ಮ ಮಗ ಹಾಗೂ ಸೊಸೆಯಿಂದಲೇ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ  ಬಗ್ಗೆ ಮಾಹಿತಿ ತಿಳಿದ ಹಿರಿಯ ನಾಗರಿಕ ಸಮಿತಿ, ಗಿರೀಜಾ ಅವರನ್ನು ಶೌಚಗೃಹದಿಂದ ಹೊರ ತಂದು ಉಪಚರಿಸಿ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.


Provided by

ಮಗ ಹರಿರಾಂ ಹಾಗೂ ಸೊಸೆ ಪೂಜಾ ಎಂಬವರ ವಿರುದ್ಧ ಘಟನೆ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ