ನೆಲದಲ್ಲಿ ವಿದ್ಯುತ್ ತಂತಿ ಹರಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳ ಬಂಧನ
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕರಿಯ ನೆಲದಲ್ಲಿ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಇದೀಗ ಆರೋಪಿಗಳ ಬಂಧನವಾಗಿದೆ.
ಬಂಧಿತ ಆರೋಪಿಗಳು ಕಲ್ಮಂಜ ನಿವಾಸಿಗಳಾದ ಹರೀಶ್ ಗೌಡ(59) ಸುಮಂತ್ (21) ಹಾಗೂ ಪ್ರಶಾಂತ್ (30)ಎಂಬವರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬಂಧಿಸಿದ್ದಾರೆ.
ಕಲ್ಮಂಜದಲ್ಲಿ ಕಾಡು ಪ್ರಾಣಿ ಹಿಡಿಯಲೆಂದು ತಂತಿಗೆ ವಿದ್ಯುತ್ ಹಾರಿಸಿದ ಆರೋಪಿಗಳು ಉದಯ ಗೌಡ ಎಂಬವರ ಸಾವಿಗೆ ಕಾರಣರಾಗಿದ್ದರು. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೂ ಆರೋಪಿಗಳ ಬಂಧನವಾಗಿರಲಿಲ್ಲ.
ಈ ಹಿನ್ನಲೆಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಪೊಲೀಸರು ಎಲ್ಲ ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka