ವ್ಯವಹಾರದಲ್ಲಿ ನಷ್ಟ: ಗೋವಾದಿಂದ ಊರಿಗೆ ಮರಳಿದ ವ್ಯಕ್ತಿಯಿಂದ ದುಡುಕಿನ ನಿರ್ಧಾರ! - Mahanayaka

ವ್ಯವಹಾರದಲ್ಲಿ ನಷ್ಟ: ಗೋವಾದಿಂದ ಊರಿಗೆ ಮರಳಿದ ವ್ಯಕ್ತಿಯಿಂದ ದುಡುಕಿನ ನಿರ್ಧಾರ!

goa
29/08/2022

ವ್ಯವಹಾರದಲ್ಲಿ ನಷ್ಟ ಉಂಟಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕಡೆಕಾರಿನಲ್ಲಿ ಆ.27ರಂದು ನಡೆದಿದೆ.


Provided by

ಕಡೆಕಾರು ನಿವಾಸಿ 54 ವರ್ಷದ ಉಮೇಶ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೋವಾದಲ್ಲಿ ವ್ಯವಹಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಊರಿಗೆ ವಾಪಾಸಾಗಿದ್ದರು.

ಆರ್ಥಿಕ ಸಂಕಷ್ಟದಿಂದ ಮನನೊಂದ ಅವರು, ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ಶೈಲೇಶ್ ಎಮ್. ಹೆಗ್ಡೆ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ